ಮೋದಿ ಸಂಪುಟದಲ್ಲಿ ಮಾಜಿ ಪ್ರಧಾನಿ ಪುತ್ರ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪುತ್ರನಾದ ಎಚ್.ಡಿ. ಕುಮಾರಸ್ವಾಮಿ ಅವರು ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಚಿವ ಸ್ಥಾನ ಅಲಂಕರಿಸಿದ್ದಾರೆ. 1994ರಲ್ಲಿ ರಾಮನಗರದಿಂದ ಗೆದ್ದು ಮುಖ್ಯಮಂತ್ರಿ ಹುದ್ದೆಗೇರಿದ್ದ ದೇವೇಗೌಡರು 1996ರಲ್ಲಿ ದೇಶದ ಅತ್ಯುನ್ನತ ಪ್ರಧಾನಿ ಹುದ್ದೆ ಅಲಂಕರಿಸಿದರು. 11 ತಿಂಗಳು ಪ್ರಧಾನಿಯಾಗಿದ್ದ ಅವರು ನಂತರ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ 2002ರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಮತ್ತೆ ಸಂಸತ್ ಪ್ರವೇಶಿಸಿದ್ದರು. ತಂದೆ ನೆರಳಿನಲ್ಲಿ ರಾಜಕಾರಣಕ್ಕೆ ಬಂದ ಕುಮಾರಸ್ವಾಮಿ ಅವರು ತಂದೆ ಪ್ರಧಾನಿಯಾಗಿದ್ದಾಗಲೇ ಮೊದಲ ಸಲ ಸಂಸದರಾಗಿದ್ದರೂ ಸಚಿವ ಸಿಕ್ಕಿರಲಿಲ್ಲ. ಇದೀಗ ತಮ್ಮ ಪಕ್ಷ ಎನ್‌ಡಿಎ ಮೈತ್ರಿಕೂಟದ ಭಾಗವಾದ ಬಳಿಕ ಮಂಡ್ಯದಿಂದ ಗೆದ್ದಿರುವ ಕುಮಾರಸ್ವಾಮಿ ಮೊದಲ ಸಲ ಕೇಂದ್ರ ಸಚಿವ ಸ್ಥಾನ ಅಲಂಕರಿಸಿದ್ದಾರೆ.