ಹಾರೋಹಳ್ಳಿ: ರಾಷ್ಟ್ರೀಯ ಹೆದ್ದಾರಿ 209 ರಸ್ತೆ ಸಂಪೂರ್ಣ ಕಳಪೆ ಮತ್ತು ಅವೈಜ್ಞಾನಿಕವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಬಗ್ಗೆ ಗಮನಹರಿಸಿಲ್ಲ. ಪರಿಣಾಮ ರಸ್ತೆ ಪಕ್ಕ ಅಲ್ಲಲ್ಲಿ ದೊಡ್ಡ ಗುಂಡಿಗಳು ಬೀಳುತ್ತಿವೆ ಎಂದು ರೈತ ಸಂಘ ಮತ್ತು ಕನ್ನಡ ಪರ ಸಂಘಟನೆಯ ಪಧಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಹಾರೋಹಳ್ಳಿ ಕೈಗಾರಿಕಾ ಪ್ರದೇಶ, ಹುಳುಗೊಂಡನಹಳ್ಳಿ ರಸ್ತೆ ಸಂಪರ್ಕ ಕಲ್ಪಿಸುವ ತಿರುವಿನಲ್ಲಿ ದೊಡ್ಡ ಗುಂಡಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ ಕಳಪೆ ಮತ್ತು ಅವೈಜ್ಙಾನಿಕವಾಗಿ ರಸ್ತೆ ನಿರ್ಮಾಣ ಮಾಡಿದರ ಪರಿಣಾಮ ಈ ರೀತಿ ಸಮಸ್ಯೆ ಎದುರಾಗಿದೆ ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು.

ಅಪಘಾತ ಹೆಚ್ಚಾಗುತ್ತಿರುವುದರಿಂದ ಹೆದ್ದಾರಿ ಪ್ರಾಧಿಕಾರ ಪ್ರಯಾಣಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ. ಮುಂದಿನ ದಿನಗಳಲ್ಲಿ ಪ್ರಾಧಿಕಾರ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದು ರೈತ ಸಂಘದ ಪದಾಧಿಕಾರಿಗಳು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಗೌರವಾಧ್ಯಕ್ಷ ಅನಂತ್ ರಾಮ್ ಪ್ರಸಾದ್, ತಾಲ್ಲೂಕು ಘಟಕದ ಅಧ್ಯಕ್ಷ ರಾಮಲಿಂಗಯ್ಯ, ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಆಂಜನಪ್ಪ, ಯುವ ಘಟಕದ ಅಧ್ಯಕ್ಷ ವೆಂಕಟೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.