ಕನಕಪುರ: ಕಲ್ಲಹಳ್ಳಿ ಮಹಾಲಕ್ಷ್ಮಿ ದೇವಾಲಯದ ಬಾಗಿಲು ಮುರಿದು ದೇವಿಯ ಚಿನ್ನದ ತಾಳಿ ಹಾಗೂ ಕಾಣಿಕೆ ಹುಂಡಿಯ ಹಣ ಕಳ್ಳತನ ಮಾಡಲಾಗಿದೆ.

ತಾಲ್ಲೂಕಿನ ಕಸಬಾ ಹೋಬಳಿ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದ ಕಲ್ಲಹಳ್ಳಿಯ ಪ್ರವೇಶ ದ್ವಾರದಲ್ಲಿರುವ ಮಹಾಲಕ್ಷ್ಮಿ ದೇವಾಲಯದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ದರೋಡೆಕೋರರು ಬಾಗಿಲನ್ನು ಹಾರೆಯಿಂದ ಮೀಟಿ ಒಳನುಗ್ಗಿ ದೇವಿಯ ಮೇಲಿದ್ದ ಚಿನ್ನದ ತಾಳಿ ಮತ್ತು ಹುಂಡಿಯನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯಲು ಹೋದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಈ ಸಂಬಂಧ ದೇವಾಲಯ ಟ್ರಸ್ಟ್ ಕಾರ್ಯದರ್ಶಿ ದಿನೇಶ್ ಕುಮಾರ್ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.