ರಾಮನಗರ: ಬಿಗ್ಬಾಸ್ ರಿಯಾಲಿಟಿ ಶೋನಿಂದ ಪ್ರಶಾಂತ್ ಸಂಬರಗಿ ಅವರನ್ನು ಹೊರಗೆ ಹಾಕುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಶೋನ ಚಿತ್ರೀಕರಣ ನಡೆದಿರುವ ಬಿಡದಿಯ ಇನೋವೇಟಿವ್ ಫಿಲ್ಮ್ ಸಿಟಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಸಹ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ. ಬಿಗ್ಬಾಸ್ ಮನೆಯೊಳಗೆ ರಾಜಣ್ಣ ಅವರನ್ನು ನಿಂದಿಸಿರುವ ಪ್ರಶಾಂತ್, ಕನ್ನಡಪರ ಹೋರಾಟಗಾರರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಸ್ಪರ್ಧೆಯಿಂದ ಹೊರ ಹಾಕಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರಶಾಂತ್ ಸಂಬರಗಿ ಎನ್ನುವ ವ್ಯಕ್ತಿ ಪ್ರಚಾರಕ್ಕೋಸ್ಕರ ಕನ್ನಡಿಗರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಶೋನಿಂದ ಹೊರಹಾಕುವ ಜೊತೆಗೆ ಇಲ್ಲಿಂದ ಗಡಿಪಾರು ಮಾಡಬೇಕು. ಇಲ್ಲವಾದಲ್ಲಿ ಸರ್ಕಾರವೇ ಬಿಗ್ಬಾಸ್ ಚಿತ್ರೀಕರಣಕ್ಕೆ ನಿಷೇಧ ಹೇರಬೇಕು ಎಂದು ಆಗ್ರಹಿಸಿದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.