ರಾಮನಗರ: ಪುತ್ರ ನಿಖಿಲ್‌ಗೆ ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು, ನಾನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಶಾಸಕಿ ‘ಈ ಹಿಂದಿನ ಹಲವು ಚುನಾವಣೆಗಳಲ್ಲಿ ಪಕ್ಷದ ವರಿಷ್ಠರಾದ ಎಚ್.ಡಿ. ದೇವೇಗೌಡರು ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಸ್ಪರ್ಧೆ ಮಾಡಿದ್ದು, ಸೋಲು–ಗೆಲುವು ಕಂಡಿದ್ದೇನೆ. ಎಲ್ಲ ಚುನಾವಣೆಗಳಲ್ಲಿಯೂ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು ದೇವೇಗೌಡರು ಕಟ್ಟಿದ ಪಕ್ಷ ಮತ್ತು ಅದರ ವರ್ಚಸ್ಸಿಗೆ ಎಂದೂ ಧಕ್ಕೆ ತರುವ ಕೆಲಸ ಮಾಡಿಲ್ಲ. ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು’ ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.