ಚನ್ನಪಟ್ಟಣ (ರಾಮನಗರ): ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶನಿವಾರ ತಾಲ್ಲೂಕಿನ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಿದರು.

ವಿರುಪಾಕ್ಷಿಪುರ ಗ್ರಾಮದಿಂದ ಚುನಾವಣಾ ಪ್ರಚಾರ ಆರಂಭಿಸಿ, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ವೇಳೆ ನಿಖಿಲ್ ಅವರಿಗೆ ಹೂವಿನ ಸುರಿಮಳೆ ಸುರಿಸಿ ಅದ್ದೂರಿ ಸ್ವಾಗತ ಕೋರಿದರು.

ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ದೀಪಾವಳಿ ಹಬ್ಬ ಇದ್ದರು ಸಹ ಎರಡು ಪಕ್ಷದ, ಮುಖಂಡರು, ಕಾರ್ಯಕರ್ತರು ಪ್ರಚಾರ ಮಾಡ್ತಿದ್ದಾರೆ. ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗ್ತಿದೆ. ಈ ಬಾರಿ ಜನ ನನಗೆ ಬೆಂಬಲ ನೀಡುವ ವಿಶ್ವಾಸ ಇದೆ ಎಂದು ತಿಳಿಸಿದರು.

ಕಣ್ಣೀರು ಉದ್ದೇಶಪೂರ್ವಕವಲ್ಲ: ನಿಖಿಲ್ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಕಾಂಗ್ರೆಸ್ ನಾಯಕರ ವ್ಯಂಗ್ಯ ವಿಚಾರಕ್ಕೆ ಮಾತನಾಡಿ ಅವರು, ‘ರಾಮನಗರ ಜಿಲ್ಲೆಯ ಜನತೆ ಜೊತೆ ಅವಿನಾಭಾವ ಸಂಬಂಧ ಇದೆ. ನಾವು ಮಾಡಿರೋ ಅಭಿವೃದ್ಧಿ ವಿಚಾರ ಮನವರಿಕೆ ಮಾಡಿ ಮತ ಕೇಳ್ತಿದ್ದೇವೆ. ನಾನು ಉದ್ದೇಶ ಪೂರ್ವಕವಾಗಿ ಮತಗಿಟ್ಟಿಸಲು ಕಣ್ಣೀರು ಹಾಕಿಲ್ಲ. ನನ್ನ ನೋವನ್ನು ಜನರ ಬಳಿ ಹೇಳಿಕೊಳ್ಳುವಾಗ ಕಣ್ಣೀರು ಹಾಕಿದ್ದೇನೆ. ಇದರಲ್ಲಿ ಬೆರೆ ಯಾವುದೇ ಬೇರೆ ಉದ್ದೇಶ ಇಲ್ಲ’ ಎಂದು ತಿಳಿಸಿದರು.

ಕಾಂಗ್ರೆಸ್ನವರು ಆತ್ಮಾವಲೋಕನ ಮಾಡಿಕೊಳ್ಳಲಿ

ಇಂದಿನ ನಿಖಿಲ್ ಪರಿಸ್ಥಿತಿಗೆ ಅವರ ತಂದೆ-ತಾಯಿ ಕಾರಣ ಎಂಬ ಡಿ.ಕೆ.ಸುರೇಶ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ‘ನನ್ನ ಪರಿಸ್ಥಿತಿಗೆ 2019ರ ಚುನಾವಣೆಯಲ್ಲಿ ಯಾರು ಕಾರಣ ಅಂತ ಇಡೀ ರಾಜ್ಯಕ್ಕೆ ಗೊತ್ತು. ಮೈತ್ರಿ ಧರ್ಮ ಪಾಲನೆ ಮಾಡದೇ ಸೋಲಿಸಿದ್ದು ಯಾರು ಅಂತ ಪ್ರತಿಯೊಬ್ಬರಿಗೂ ಗೊತ್ತು. ಅವರೇ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ನನ್ನ ಸೋಲಿಗೆ ಯಾರೂ ಕಾರಣ ಅಲ್ಲ. ಮಂಡ್ಯ ಜನ, ರಾಮನಗರ ಜನ ಪ್ರೀತಿ ಕೊಟ್ಟಿದ್ದಾರೆ. ಕಾಂಗ್ರೆಸ್ನವರು ಏನೇನು ಮಾತನಾಡ್ತಿದ್ದಾರೆ ಅದಕ್ಕೆ ಜನ ತಕ್ಕ ಉತ್ತರ ಕೊಡ್ತಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.