ರಾಮನಗರ: ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಮಿಕರ ಮಕ್ಕಳ ಶಿಕ್ಷಣ ಉತ್ತೇಜಿಸುವ ಸಲುವಾಗಿ ನೀಡುವ ಕೊಟ್ಟಿರುವ ಲ್ಯಾಪ್‌ಟಾಪ್‌ಗಳನ್ನು ಚನ್ನಪಟ್ಟಣ ತಾಲ್ಲೂಕಿನ ಫಲಾನುಭವಿಗಳಿಗೆ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಗೃಹ ಕಚೇರಿಯಲ್ಲಿ ಇತ್ತೀಚೆಗೆ ವಿತರಿಸಿದರು.

ಬಳಿಕ ಮಾತನಾಡಿದ ಅವರು, ‘ಕಾರ್ಮಿಕರು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರದಿಂದ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ನಿಟ್ಟಿನಲ್ಲಿ ಸ್ಥಾಪಿಸಿರುವ ಕಾರ್ಮಿಕರ ಕಲ್ಯಾಣ ಮಂಡಳಿಯಡಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಮಕ್ಕಳು ಇವುಗಳ ಪ್ರಯೋಜನ ಪಡೆದು ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿ, ಹೆತ್ತವರಿಗೆ ಕೀರ್ತಿ ತರಬೇಕು’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಭಾಷ ಎಂ. ಆಲದಕಟ್ಟಿ ಮಾತನಾಡಿ, ‘ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲೆಗೆ ಈ ಬಾರಿ 246 ಲ್ಯಾಪ್‌ಟಾಪ್‌ಗಳು ಮಂಜೂರಾಗಿವೆ. ತಾಲ್ಲೂಕುವಾರು ತಲಾ 60 ಕಾರ್ಮಿಕರ ಮಕ್ಕಳನ್ನು ಗುರುತಿಸಿ ಹಂಚಿಕೆ ಮಾಡಲಾಗುತ್ತಿದೆ. ತಾಲ್ಲೂಕುವಾರು ಬಂದ ಅರ್ಜಿಗಳನ್ನು ಹೆಚ್ಚುವರಿ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ಮೇಲ್ವಿಚಾರಣ ಸಮಿತಿ ಪರಿಶೀಲನೆ ನಡೆಸಿ, ಅಂತಿಮವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ’ ಎಂದು ತಿಳಿಸಿದರು.

ಚನ್ನಪಟ್ಟಣ ತಾಲ್ಲೂಕು ಕಾರ್ಮಿಕ ನಿರೀಕ್ಷಕ ಮುನಿಲಿಂಗೇಗೌಡ, ಫಲಾನುಭವಿಗಳ ಪೋಷಕರು ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.