ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಹಾಗೂ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ನಡುವಿನ ಮುನಿಸು ಸ್ಫೋಟಗೊಂಡಿದೆ. ಈ ಬಾರಿ ಕ್ಷೇತ್ರದಲ್ಲಿ ರೇವಣ್ಣರಿಗೇ ಟಿಕೆಟ್ ಕೊಡಿ ಎಂದು ಬಾಲಕೃಷ್ಣ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಮಾಗಡಿ ತಾಲ್ಲೂಕಿನ ಸಾವನದುರ್ಗದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ರೇವಣ್ಣ, ಜೆಡಿಎಸ್ ಶಾಸಕ ಎ.ಮಂಜುನಾಥ್ ಅವರನ್ನು ಹೊಗಳಿದ್ದರು. ಇದಕ್ಕೆ ಬಾಲಕೃಷ್ಣ ಮತ್ತು ಅವರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಕಳೆದ 25 ವರ್ಷದಿಂದ ನನ್ನ ಹಾಗೂ ರೇವಣ್ಣ ನಡುವೆ ರಾಜಕೀಯ ಜಿದ್ದಾಜಿದ್ದಿ ಇತ್ತು. ನಾನು ಕಾಂಗ್ರೆಸ್ ಸೇರಿದ ಬಳಿಕವೂ ಅವರು ನನ್ನನ್ನು ಮುಕ್ತ ಮನಸ್ಸಿನಿಂದ ಬೆಂಬಲಿಸಲಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಕೆಲಸ ಮಾಡುವಂತೆ ತಮ್ಮ ಕೆಲವು ಬೆಂಬಲಿಗರಿಗೆ ಕರೆ ಕೊಟ್ಟಿದ್ದರು' ಎಂದು ಪತ್ರದಲ್ಲಿ ಬಾಲಕೃಷ್ಣ ಆರೋಪಿಸಿದ್ದಾರೆ.

'ಮಾಗಡಿಯಲ್ಲಿ ರೇವಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟರೆ ಸಹಕಾರ ನೀಡುವುದಾಗಿ ಜೆಡಿಎಸ್ ಶಾಸಕರು ಹೇಳಿದ್ದಾರೆ. ರೇವಣ್ಣ ಮನಸ್ಸಿನಲ್ಲೂ ಅದೇ ಇದ್ದಂತೆ ಇದೆ. ಹೀಗಾಗಿ ಪಕ್ಷ ಅವರಿಗೇ ಟಿಕೆಟ್ ನೀಡಿದರೆ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ಸಿದ್ದ' ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.