ಮಾಗಡಿ: ತಾಲ್ಲೂಕಿನ ಮಂಚನಬೆಲೆ ಜಲಾಶಯದ ಸಮೀಪ ಈಚೆಗೆ ಕೊಚ್ಚಿ ಹೋಗಿದ್ದ ತಾತ್ಕಲಿಕ ಸೇತುವೆ ಜಾಗದಲ್ಲಿ ಸ್ಥಳದಲ್ಲಿ ಕಾವೇರಿ ನೀರಾವರಿ ನಿಗಮದಿಂದ ಮತ್ತೊಂದು ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ.

ಕಳೆದ ಒಂದೂವರೆ ವರ್ಷಗಳ ಹಿಂದೆ ಹೆಚ್ಚುವರಿ ಮಳೆಯಿಂದ ಮುಖ್ಯ ಸೇತುವೆ ಕೂಡ ಕೊಚ್ಚಿ ಹೋಗಿದ್ದರಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಮಂಚನಬೆಲೆ 2,000ಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರ ಬಿಡಲಾಗಿತ್ತು. ಈ ವೇಳೆ ತಾತ್ಕಾಲಿಕ ಸೇತುವೆ ನೀರಿನಲ್ಲಿ ಕೊಚ್ಚಿಹೋಗಿತ್ತು. ಇದರಿಂದ ರಸ್ತೆ ಸಂಪರ್ಕ ಕಡಿತವಾಗಿತ್ತು.

ಈಗ ಜಲಾಶಯದಿಂದ ನೀರಿನ ಅರಿವು ಕಡಿಮೆ ಇರುವುದರಿಂದ ಹಳೆ ಸೇತುವೆ ಇದ್ದ ಜಾಗದಲ್ಲೇ ಈಗ ಮತ್ತೊಂದು ಮಣ್ಣಿನ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ. ಇದರಿಂದ ಮಂಚನಬೆಲೆ ಗ್ರಾಮದಿಂದ ವಿವಿಧ ಗ್ರಾಮಗಳಿಗೆ ತೆರಳುವ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಅನುಕೂಲ ಆಗಿದೆ.

ಈ ಬಗ್ಗೆ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಮಂಜುನಾಥ್, ಸೇತುವೆ ಕೊಚ್ಚಿ ಹೋದಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ. ಇದೀಗ ಅಧಿಕಾರಗಳುತಾತ್ಕಾಲಿಕ ಸೇತುವೆ ನಿರ್ಮಿಸಿದ್ದಾರೆ. ಸರ್ಕಾರಿ ಬಸ್ ಸೇವೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.