ರಾಮನಗರ: ‘ಈಗಲ್‌ಟನ್ ಪರವಾಗಿ ಮಾತನಾಡುವ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರ ನಿಜವಾದ ಬಣ್ಣ ಬಯಲಾಗಿದೆ’ ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದರು.

ಈಗಲ್‌ಟನ್ ರೆಸಾರ್ಟ್ ವಿವಾದದ ಬಗ್ಗೆ ಸದನದಲ್ಲಿ ಕುಮಾರಸ್ವಾಮಿ–ಸಿದ್ದರಾಮಯ್ಯ ನಡುವಿನ ವಾಗ್ವಾದ ಕುರಿತು ಶುಕ್ರವಾರ ಇಲ್ಲಿ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು.

‘ದಂಡ ಹೆಚ್ಚಾಗಿ ಹಾಕಿರುವುದಕ್ಕೆ ಅವರಿಗೆ ಏನು ತೊಂದರೆ ಆಗಿದೆಯೋ ಗೊತ್ತಿಲ್ಲ. ಸರ್ಕಾರ ಹಾಗೂ ಜಿಲ್ಲಾಧಿಕಾರಿ ಸೇರಿ ಕಾನೂನಿನ ಪ್ರಕಾರ ದಂಡ ನಿಗದಿ ಮಾಡಿದ್ದಾರೆ. ರೆಸಾರ್ಟ್‌ನವರು ಯಾವ ದರದಲ್ಲಿ ಸೈಟ್ ಮಾಡಿ ಮಾರಿದ್ದರೂ ಅದರ ಆಧಾರದ ಮೇಲೆ ದಂಡ ನಿಗದಿಪಡಿಸಿದ್ದಾರೆ. ಇದರಲ್ಲಿ ನಮ್ಮ ಪಕ್ಷ–ನಾಯಕರ ಪಾತ್ರ ಏನೂ ಇಲ್ಲ ’ ಎಂದರು.

ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಕುರಿತು ಪ್ರತಿಕ್ರಿಯಿಸಿದ ಅವರು, ‘ದೇಶದ ಜನ ಕಾಂಗ್ರೆಸ್ ಮೇಲಿನ ವಿಶ್ವಾಸ ಕಡಿಮೆ ಮಾಡಿದ್ದಾರೆ. ಈ ಬಗ್ಗೆ ಪಕ್ಷದ ನಾಯಕರು ಚರ್ಚೆ ಮಾಡುತ್ತಾರೆ. ಆದರೆ, ಎಲ್ಲಾ ಚುನಾವಣೆಗಳೂ ಒಂದೇ ರೀತಿ ಇರುವುದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸದೃಢವಾಗಿದೆ. ಬಿಜೆಪಿ ಗೆಲುವು ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.