ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಹಗರಣ: ಪ್ರತಿಭಟಿಸಲು ಮೈಸೂರಿಗೆ ಹೊರಟಿದ್ದ bjp ಕಾರ್ಯಕರ್ತರು ಪೊಲೀಸ್ ವಶಕ್ಕೆ

Published 12 ಜುಲೈ 2024, 6:13 IST
Last Updated 12 ಜುಲೈ 2024, 6:13 IST
ಅಕ್ಷರ ಗಾತ್ರ

ರಾಮನಗರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, ಮೈಸೂರಿನಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ನಗರದಲ್ಲಿ ವಶಕ್ಕೆ ಪಡೆದರು.

ಕಾರು ಸೇರಿದಂತೆ ವಿವಿಧ ವಾಹನಗಳಲ್ಲಿ ಮೈಸೂರಿಗೆ ತೆರಳುತ್ತಿದ್ದ ಮುಖಂಡರು ಹಾಗೂ ಕಾರ್ಯಕರ್ತರ ವಾಹನವನ್ನು, ಇಲ್ಲಿನ ಎಸ್.ಪಿ. ಕಚೇರಿ ವೃತ್ತದ ಬಳಿ ರಸ್ತೆಗೆ ಬ್ಯಾರಿಕೇಡ್ ಹಾಕಿ ಕಾಯುತ್ತಿದ್ದ ಪೊಲೀಸರ ತಂಡ ತಡೆಯಿತು‌.

ವಾಹನದಲ್ಲಿದ್ದ ಮಹಿಳಾ ಮತ್ತು ಪುರುಷ ಕಾರ್ಯಕರ್ತರನ್ನು ಕೆಳಕ್ಕಿಳಿಸಿದ ಪೊಲೀಸರು ತಮ್ಮ ವಶಕ್ಕೆ ಪಡೆದರು. ನಂತರ, ಪೊಲೀಸ್ ವಾಹನ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಕರೆದೊಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT