ಕುದೂರು: ತಾಲ್ಲೂಕಿನ ಒಕ್ಕಲಿಗ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹುದ್ದೆಗೆ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಶಿಕ್ಷಕ ಮಲ್ಲೂರು ಲೋಕೇಶ್, ಕಾರ್ಯಾಧ್ಯಕ್ಷರಾಗಿ ನರಸಿಂಹಯ್ಯ ಆಯ್ಕೆಯಾದರು.

ತಾಲ್ಲೂಕಿನ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಸಭೆ ಸೇರಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ಈ ಹಿಂದೆ ಮಾಗಡಿ ತಾಲ್ಲೂಕಿನ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿದ್ದ ಹೂಜಿಗಲ್ ನಾಗರಾಜು, ನೆಲಮಂಗಲ ತಾಲ್ಲೂಕಿಗೆ ವರ್ಗಾವಣೆಗೊಂಡ ಬಳಿಕ ಖಾಲಿಯಾಗಿದ್ದ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು.

ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ ಉಪಾಧ್ಯಕ್ಷ ನಾರಾಯಣ್, ಸಿ.ಎನ್.ಕೃಷ್ಣಪ್ಪ, ಪುಟ್ಟಸ್ವಾಮಿ, ಸಹ ಕಾರ್ಯದರ್ಶಿ ಬಸಪ್ಪ, ಪ್ರಧಾನ ಕಾರ್ಯದರ್ಶಿ ಡಿ.ಜಿ ಗಂಗಾಧರ, ಶಿವಸ್ವಾಮಿ, ಟಿ.ಎ ಕೃಷ್ಣ, ವೆಂಕಟಾಚಲಮೂರ್ತಿ, ವೆಂಕಟೇಶ್, ವಿಜಯಲಕ್ಷ್ಮಿ, ಸುರೇಶ್, ಜಿ.ಎನ್ ಗೋವಿಂದರಾಜು, ಶ್ರೀನಿವಾಸ್, ಎಚ್.ಎಂ. ನಾಗರಾಜು, ನರಸಿಂಹಯ್ಯ, ಅಶ್ವಥ್, ದೇವರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.