ಕನಕಪುರ: ಮಹಿಳೆಯೊಬ್ಬರ ಅಶ್ಲೀಲ ಫೋಟೊಗಳನ್ನು ವ್ಯಾಟ್ಸ್‌ಆ್ಯಪ್‌ನಲ್ಲಿ ಕಳುಹಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿ ಬೆಂಗಳೂರಿನ ಅಬೀಬ್ ಉಲ್ಲಾಖಾನ್ ಎಂದು ಗುರುತಿಸಲಾಗಿದೆ. ತಿಮ್ಮಸಂದ್ರ ಗ್ರಾಮದ ಮಹಿಳೆಯೊಬ್ಬರ ಫೋಟೊ ಇಟ್ಟುಕೊಂಡು ಬೆದರಿಸುತ್ತಿದ್ದ. ಈ ಹಿಂದೆಯೂ ಇದೇ ರೀತಿ ಬ್ಲಾಕ್ ಮೇಲ್ ಮಾಡಿದ್ದು ಕರೆಸಿ ವಿಚಾರಣೆ ಮಾಡಿದಾಗ ದೂರುದಾರ ಮಹಿಳೆಯನ್ನು ವಿವಾಹವಾಗಿದ್ದಾಗಿ ಪೊಲೀಸರಿಗೆ ತಿಳಿಸಿದ್ದ. ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ ಎಂದು ತಪ್ಪೊಪ್ಪಿಗೆ ಬರೆದು ಕೊಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಈ ಹಿಂದೆ ತನ್ನೊಂದಿಗಿದ್ದ ಖಾಸಗಿ ಕ್ಷಣದ ಫೋಟೊಗಳನ್ನು ವಾಟ್ಸ್‌ಆ್ಯಪ್‌ಗೆ ಕಳುಹಿಸಿ, ಹೇಳಿದಂತೆ ಕೇಳದಿದ್ದರೆ ಸಾಮಾಜಿಕ ಜಾಲತಾಣಕ್ಕೆ ಫೋಟೊ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.