ರಾಮನಗರ: ‘ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು’ ಎಂದು ಡಯಟ್ನ ಪದನಿಮಿತ್ತ ಉಪ ನಿರ್ದೇಶಕ ಹಾಗೂ ಪ್ರಾಂಶುಪಾಲ ಪ್ರಭುಸ್ವಾಮಿ ಸಲಹೆ ನೀಡಿದರು.

ನಗರದ ಗುರುಭವನದಲ್ಲಿ ಮಂಗಳವಾರ ಜರುಗಿದ 2024–25ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಭೆಗೆ ವೇದಿಕೆಯಾಗುವ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಲ್ಲಿ ಮಕ್ಕಳು ಭಾಗವಹಿಸಬೇಕು. ಇದರಿಂದ ಅವರಿಗಿರುವ ವೇದಿಕೆ ಭಯವು ಹೋಗಲಿದ್ದು, ಮುಂದೆ ತಮ್ಮ ಪ್ರತಿಭೆಯಲ್ಲೇ ಎತ್ತರಕ್ಕೆ ಬೆಳೆಯುವ ಅವಕಾಶ ಸಿಗುತ್ತದೆ’ ಎಂದರು.

‘ಮಕ್ಕಳು ಅತ್ಯಂತ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಖುಷಿ ತಂದಿದೆ. ಇದರ ಹಿಂದೆ ಅವರ ತಂದೆ–ತಾಯಿ ಶ್ರಮ ಇರುವುದನ್ನು ಅಲ್ಲಗಳೆಯುವಂತಿಲ್ಲ. ಜೊತೆಗೆ, ಶಿಕ್ಷಕರು ಸಹ ಅವರನ್ನು ಪ್ರೇರೇಪಿಸುವ ಮೂಲಕ ಅವರ ಪ್ರತಿಭೆಯು ಅನಾವರಣಗೊಳ್ಳಲು ಕಾರಣವಾಗಿದ್ದಾರೆ. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರವೂ ಅತಿ ಮುಖ್ಯವಾಗಿದೆ’ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ.ಸಿ. ಬಸವರಾಜೇಗೌಡ ಮಾತನಾಡಿ, ‘ಪ್ರತಿಭಾ ಕಾರಂಜಿ ಮಕ್ಕಳಿಗೆ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳು ಸಹ ಆಧಾರವಾಗಿದೆ. ಇದರಿಂದಾಗಿ ಮಕ್ಕಳಲ್ಲಿ ಕಲಿಕಾ ಉತ್ಸಾಹ ಸಹ ಹೆಚ್ಚಾಗಿದ್ದು, ಅವರ ಸರ್ವಾಂಗಿಣ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ವಿಜೇತರಾದವರು ಜಿಲ್ಲಾಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಇಲ್ಲಿ ಗೆದ್ದವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ಅವಕಾಶ ಪಡೆಯುತ್ತಾರೆ. ಜಿಲ್ಲಾ ಮಟ್ಟದ ಯಾವುದೇ ಸ್ಪರ್ಧೆಗಳಲ್ಲಿ
ಮಕ್ಕಳ ಪ್ರತಿಭೆಯನ್ನು ನಿಷ್ಪಕ್ಷಪಾತವಾಗಿ ಗುರುತಿಸಿ, ಪ್ರಶಸ್ತಿಯನ್ನು ತೀರ್ಮಾನಿಸಬೇಕು’ ಎಂದು ತೀರ್ಪುಗಾರರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಆಡಳಿತ ಕಚೇರಿಯ ಅಧಿಕಾರಿಗಳು, ನಾಲ್ಕೂ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ನೋಡಲ್ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಎಲ್ಲಾ ಸಂಘಟನೆಗಳ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.