ಕನಕಪುರ: ರಾಮನಗರ ಜಿಲ್ಲೆ ರೇಷ್ಮೆ ಬೆಳೆ ಹಾಗೂ ನೂಲು ತಯಾರಿಕೆಯಲ್ಲಿ ವಿಶ್ವವಿಖ್ಯಾತಿ ಪಡೆದಿದೆ, ಇಲ್ಲಿ ರೇಷ್ಮೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೇಷ್ಮೆ ಬೆಳೆ ಬೆಳೆಯುವ ರೈತರಿಗೆ ಹಾಗೂ ನೂಲು ಬಿಚ್ಚುವರಿಗೆ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಒತ್ತಾಯಿಸಿದರು.

ನಗರದ ಸರ್ಕಾರಿ ಗೂಡಿನ ಮಾರುಕಟ್ಟೆಯಲ್ಲಿ ಮಂಗಳವಾರ ರೈತ ಸಂಘ ಹಾಗೂ ರೇಷ್ಮೆ ಬೆಳೆಗಾರರ ಸಂಘದಿಂದ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

ಜಿಲ್ಲೆಯ ಲಕ್ಷಾಂತರ ರೈತರು ರೇಷ್ಮೆ ಬೆಳೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಾ ಬಂದಿದ್ದಾರೆ. ರೇಷ್ಮೆ ಬೆಳೆಗಾರ ತಾನು ಬೆಳೆದ ರೇಷ್ಮೆ ಗೂಡನ್ನು ಮಾರುಕಟ್ಟೆಗೆ ತಂದು ಮಾರಾಟಕ್ಕಿಟ್ಟಾಗ ಆತನಿಗೆ ನ್ಯಾಯಯುತವಾದ ಬೆಲೆ ದೊರಕದೆ ಸಂಕಷ್ಟದ ಸುಳಿಗೆ ಸಿಕ್ಕಿ ನರಳುತ್ತಾ ಇದ್ದರೂ ಅವರ ಸಹಾಯಕ್ಕೆ ಸರ್ಕಾರ ಹೋಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಕಷ್ಟದಲ್ಲಿರುವ ರೇಷ್ಮೆ ಬೆಳೆಗಾರರ ಸಹಾಯಕ್ಕೆ ಸರ್ಕಾರ ದಾವಿಸಬೇಕು, ಇವರ ಸಂಕಷ್ಟಕ್ಕೆ ಸ್ಪಂದಿಸಿ ಬೆಂಬಲ ಬೆಲೆ ಘೋಷಿಸಬೇಕು ಹಾಗೆಯೇ ನೂಲಿನ ದರವು ಕಡಿಮೆಯಾದಾಗ ಅವರಿಗೂ ಬೆಂಬಲ ಬೆಲೆಯನ್ನು ನೀಡಬೇಕೆಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಈ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಎಲ್ಲಾ ರೇಷ್ಮೆ ಮಾರುಕಟ್ಟೆಗಳ ಮುಂದೆ ರೈತ ಸಂಘವು ರೇಷ್ಮೆ ಬೆಳೆಗಾರರ ಜೊತೆಗೂಡಿ ನಿರಂತರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಸಿದರು.

ರೈತರ ಹಾಗೂ ನೂಲು ಬಿಚ್ಚುವವರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿದ ಮನವಿ ಪತ್ರವನ್ನು ಉಪ ತಹಸಿಲ್ದಾರ್ ಶಿವಕುಮಾರ್, ರೇಷ್ಮೆ ಗೂಡಿನ ಮಾರುಕಟ್ಟೆಯ ಉಪ ನಿರ್ದೇಶಕ ನಾಗರಾಜುರವರಿಗೆ ನೀಡಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಕುಮಾರ್, ಮುಖಂಡರಾದ ಪುಟ್ಟ ಮಾದೇಗೌಡ, ನಂಜರಾಜೇ ಅರಸು, ಹಾರೋಹಳ್ಳಿ ತಾಲ್ಲೂಕು ಅಧ್ಯಕ್ಷ ಬಸವರಾಜು, ಸಿದ್ದರಾಜು, ಶಿವರಾಜು, ಮಹದೇವು, ಶಿವರಾಜು ಸಾತನೂರು, ಹೋಬಳಿ ಅಧ್ಯಕ್ಷ ತಿಮ್ಮೇಗೌಡ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.