ಕನಕಪುರ: ದಲಿತರಿಗೆ ನೀಡಿದ್ದ ಸ್ಮಶಾನ ಜಾಗವನ್ನು ಅಭಿವೃದ್ದಿಪಡಿಸದ ಕಾರಣ ಶವಸಂಸ್ಕಾರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ಶವ ಸಂಸ್ಕಾರ ಮಾಡದೆ ಸ್ಮಶಾನ ಅಭಿವೃದ್ಧಿಗೆ ಆಗ್ರಹಿಸಿದ ಘಟನೆ ದೊಡ್ಡಾಲಹಳ್ಳಿ ಗ್ರಾಮದಲ್ಲಿ ಬುಧವಾರ ನಡೆಯಿತು.

ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ದೊಡ್ಡಾಲಹಳ್ಳಿ ಗ್ರಾಮದಲ್ಲಿ ದಲಿತರ ಸ್ಮಶಾನಕ್ಕಾಗಿ ನೀಡಿದ್ದ ಒಂದು ಎಕರೆ ಜಾಗವು ಕಲ್ಲು ಬಂಡೆಗಳಿಂದ ತುಂಬಿದ್ದು, ಸಂಸ್ಕಾರ ಮಾಡಲು ಸಾಧ್ಯವಾಗದ ಕಾರಣ ಸಮುದಾಯದವರು ಪ್ರತಿಭಟನೆಗೆ ಮುಂದಾಗಿದ್ದರು.

‘ಬೇರೆ ಕಡೆ ಎರಡು ಎಕರೆ ಜಾಗದಲ್ಲಿ ಸ್ಮಶಾನ ಅಭಿವೃದ್ಧಿಪಡಿಸಲಾಗಿದೆ. ಆದರೆ, ಆ ಜಾಗದಲ್ಲಿ ದಲಿತರಿಗೆ ಶವ ಸಂಸ್ಕಾರ ಮಾಡಲು ಅವಕಾಶವಿಲ್ಲ. ಇಲ್ಲಿ ಪ್ರತ್ಯೇಕ ಜಾಗ ಕೊಟ್ಟಿದ್ದರು. ಆದರೆ, ಅದನ್ನು ಅಭಿವೃದ್ಧಿಪಡಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನಾಕಾರರೊಂದಿಗೆ ಮಾತನಾಡಿದ ತಹಸೀಲ್ದಾರ್ ಶಿವಕುಮಾರ್, ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿ ಸ್ಮಶಾನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಈಗ ಖಾಸಗಿ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿ ಎಂದು ಮನವರಿಕೆ ಮಾಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಬಿ.ಶಿವಲಿಂಗೇಗೌಡ, ಕಂದಾಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.