ರಾಮನಗರ: ‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್ಪಿ) ರೈತರಿಂದ ಭತ್ತ ಹಾಗೂ ರಾಗಿ ಖರೀದಿಸಲು ಡಿ. 1ರಿಂದ 31ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಲ ಹಾರೋಹಳ್ಳಿ ತಾಲ್ಲೂಕಿನಲ್ಲೂ ನೂತನವಾಗಿ ಭತ್ತ ಮತ್ತು ರಾಗಿ ಖರೀದಿ ನೋಂದಣಿ ಮತ್ತು ಖರೀದಿ ಕೇಂದ್ರ ತೆರೆಯಲಾಗುವುದು’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವರು ಬೆಂಬಲ ಬೆಲೆಯಡಿ ರೈತರಿಂದ ರಾಗಿ ಮತ್ತು ಭತ್ತ ಖರೀದಿಸುವ ಅಧಿಕೃತ ಏಜೆನ್ಸಿಯಾಗಿದೆ. ನೋಂದಾಯಿತ ರೈತರಿಂದ 2025ರ ಜ. 1ರಿಂದ ಮಾರ್ಚ್ 31ರವರೆಗೆ ಆಹಾರ ಧಾನ್ಯ ಖರೀದಿಸಲಾಗುವುದು’ ಎಂದರು.

‘ರೈತರಿಂದ ರಾಗಿ ಮತ್ತು ಭತ್ತ ಖರೀದಿಸಲು ತೆರೆಯಲಾಗಿರುವ ಪ್ರತಿ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆ ವತಿಯಿಂದ ಗ್ರೇಡರ್ಗಳನ್ನು ನೇಮಿಸಬೇಕು. ರೈತರು ನೋಂದಣಿ ಮಾಡಿಸುವ ಮುನ್ನ, ಅಧಿಕಾರಿಗಳು ರೈತರ ದಾಖಲಾತಿಗಳನ್ನು ಖಾತರಿಪಡಿಸಿಕೊಂಡು ನೋಂದಣಿ ಮಾಡಿಸಿಕೊಳ್ಳಬೇಕು. ರೈತರಿಂದ ರಾಗಿ, ಭತ್ತ ಖರೀದಿಸುವ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ರೈತರು ತಮ್ಮ ಬೆಳೆ ಮಾರಾಟ ಮಾಡಲು ಯಾವುದೇ ಮಧ್ಯವರ್ತಿಗಳ ಸಹಾಯ ಪಡೆದು ವಂಚನೆಗೊಳಗಾಗಬಾರದು. ರೈತರ ಬೆಳೆಗೆ ಸೂಕ್ತ ಬೆಲೆ ನೀಡುವ ಉದ್ದೇಶದಿಂದ ಸರ್ಕಾರ ಎಂಎಸ್ಪಿ ಯೋಜನೆಯನ್ನು ಜಾರಿಗೆ ತಂದಿದೆ. ಹಾಗಾಗಿ, ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಂಡು, ರಾಗಿ ಹಾಗೂ ಭತ್ತವನ್ನು ಮಾರಾಟ ಮಾಡಬೇಕು’ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಅಂಬಿಕಾ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕಿ ಸಿ.ಆರ್. ರಮ್ಯ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಜು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಅಧಿಕಾರಿಗಳು ಇದ್ದರು.

ಎಂಎಸ್ಪಿ ದರ (ಕ್ವಿಂಟಲ್ಗೆ ₹ ಗಳಲ್ಲಿ)ರಾಗಿ;₹4290ಭತ್ತ;₹2300 (ಸಾಮಾನ್ಯ)ಭತ್ತ;₹2320 (ಗ್ರೇಡ್-ಎ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.