ಉಳ್ಳಾಲ (ದಕ್ಷಿಣ ಕನ್ನಡ): ಸೋಮೇಶ್ವರ ರುದ್ರಪಾದೆ ಸಮೀಪ ಭಾನುವಾರ ರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರಲ್ಲಿ ಒಬ್ಬರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

ನಗರದ ಎ.ಜೆ ಆಸ್ಪತ್ರೆಯಲ್ಲಿ ಸರ್ಜನ್ ಆಗಿರುವ, ರಾಮನಗರದ ಡಾ. ಆಶೀಕ್ ಗೌಡ (30) ಮೃತರು.

ಭಾನುವಾರ ತಡರಾತ್ರಿ ನಗರದಿಂದ ಸೋಮೇಶ್ವರಕ್ಕೆ ಡಾ.ಆಶೀಕ್ ಗೌಡ, ಕುಂದಾಪುರದ ಡಾ.ಪ್ರದೀಶ್ ಸೇರಿದಂತೆ ಐವರು ವೈದ್ಯರು ಬಂದಿದ್ದರು. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭದಲ್ಲಿ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದಾಗ ಡಾ.ಆಶೀಕ್ ಗೌಡ ಇಣುಕುವ ಭರದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಸಮುದ್ರದಿಂದ ಪಾರಾಗಿದ್ದಾರೆ. ತಡರಾತ್ರಿವರೆಗೂ ಅಗ್ಮಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.