ರಾಮನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ರಾಮನಗರದಲ್ಲಿ ಮಂಗಳವಾರ ಬಂದ್ ನಡೆಸಿದ ಕನ್ನಡ ಜನಪರ ವೇದಿಕೆಯ ಕಾರ್ಯಕರ್ತರು, ನಗರದ ಐಜೂರು ವೃತ್ತದಲ್ಲಿ ಬೆಳಿಗ್ಗೆ ಪ್ರತಿಭಟನೆ ನಡೆಸಿದರು.

ವೇದಿಕೆ ಅಧ್ಯಕ್ಷ ರಮೇಶ ಗೌಡ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ತಮಿಳುನಾಡು ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದ. ಬಾಯಿ ಬಡಿದುಕೊಂಡು ‘ಮತ್ತೆ ಹುಟ್ಟಿ ಬರಬೇಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು. ರಾಜ್ಯದ ಜನರ ಹಿತವನ್ನು ಬಲಿ ಕೊಡುವ ಬದಲು, ಕೂಡಲೇ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಬೇಕು. ನಾಡಿನ ಜೀವನದಿ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳಬಾರದು’ ಎಂದು ರಮೇಶ ಗೌಡ ಒತ್ತಾಯಿಸಿದರು.
.Bengaluru Bandh | ಬೆಂಗಳೂರಿನ ಹೋಟೆಲ್ಗೆ ನುಗ್ಗಿ ಗಲಾಟೆ: ಪ್ರಕರಣ ದಾಖಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.