ರಾಮನಗರ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ಇಲ್ಲಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಗುರುವಾರ ಮತ್ತೊಮ್ಮೆ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ನಿತ್ಯಾನಂದ ಸ್ವಾಮೀಜಿಗೆ ಜಾಮೀನು ಭದ್ರತೆ ನೀಡಿರುವ ವ್ಯಕ್ತಿಗೂ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿತು.

ಭಕ್ತೆ ಮೇಲಿನ ಅತ್ಯಾಚಾರ ಆರೋಪದ ಮೇಲೆ 2010ರಲ್ಲಿ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಅಂದಿನಿಂದಲೂ ವಿಚಾರಣೆ ನಡೆಯುತ್ತಿದೆ. 2019ರಿಂದ ನಿತ್ಯಾನಂದ ವಿಚಾರಣೆಗೆ ಸತತ ಗೈರಾಗಿದ್ದು, ಈಗಾಗಲೇ ದೇಶ ತೊರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.