ರಾಮನಗರ: ಲಗೋರಿ, ಚಿನ್ನಿದಾಂಡು, ಕುಂಟೋಬಿಲ್ಲೆ, ಅಣ್ಣೆಕಲ್ಲಾಟ, ರತ್ತೊ ರತ್ತೋ ರಾಯನ ಮಗಳೆ... ಸೇರಿದಂತೆ ವಿವಿಧ ಬಗೆಯ ಗ್ರಾಮೀಣ ಆಟ ಆಡುವುದರಲ್ಲಿ ಮಕ್ಕಳು ಮತ್ತು ಯುವ ಸಮೂಹ ತಲ್ಲೀನವಾಗಿತ್ತು.

ಅಲ್ಲಿ ನಡೆಯುತ್ತಿದ್ದ ಪ್ರತಿ ಆಟದಲ್ಲೂ ಭಾಗವಹಿಸಲು ಜಿಲ್ಲೆಯ ವಿವಿಧೆಡೆಯಿಂದ ತಂಡಗಳು ಬಂದಿದ್ದವು. ವಿವಿಧ ತಂಡದಲ್ಲಿದ್ದ ಆಟಗಾರರು ಗ್ರಾಮೀಣ ಕ್ರೀಡೆಯಲ್ಲಿ ಮಿಂದು ಹೋಗಿದ್ದರು.

ಹೌದು, ಇದಿಷ್ಟು ನಡೆದದ್ದು ಇಲ್ಲಿನ ಜಾನಪದ ಲೋಕದಲ್ಲಿ. ದಿವಂಗತ ಡಾ. ಜಿ. ನಾರಾಯಣ ಅವರ ನೆನಪಿನ ಕಾರ್ಯಕ್ರಮದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ‘ಗ್ರಾಮೀಣ ಆಟಗಳ ಉತ್ಸವ’ ಪ್ರೇಕ್ಷಕರ ಮನಸೂರೆಗೊಂಡಿತು.

ಗ್ರಾಮೀಣ ಹಾಗೂ ಜಾನಪದ ಸೊಗಡಿನ ಆಟಗಳು ಜನ ಮಾನಸದಿಂದ ದೂರ ಸರಿಯದಂತೆ ಮಾಡುವುದೇ ಈ ಉತ್ಸವದ ಪ್ರಮುಖ ಉದ್ದೇಶ. ಹೆಣ್ಣು ಮಕ್ಕಳಿಗೆ ಕಣ್ಣಾಮುಚ್ಚಾಲೆ, ರತ್ತೊ ರತ್ತೊ ರಾಯನ ಮಗಳೆ, ಕುಂಟೋಬಿಲ್ಲೆ, ಬಳೆಚೂರು ಆಟ; ಗಂಡು ಮಕ್ಕಳಿಗೆ ಗೋಲಿ ಆಟ, ಬುಗುರಿ ಆಟ, ಉಪ್ಪುಪ್ಪುಕಡ್ಡಿ ಆಟ ಆಡಿಸಲಾಯಿತು.

ಆಟದ ಜತೆಗೆ ಮಕ್ಕಳಿಗಾಗಿ ಹುಲಿ ಕುರಿ ಆಟ, ಚೌಕಾಬಾರ, ಅಳಿಗುಳಿ ಮನೆ ಆಟ, ಅಣ್ಣೆಕಲ್ಲಾಟ, ಲಗೋರಿ ಚಂಡು, ಚಿನ್ನಿದಾಂಡು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಯುವಕ, ಯುವತಿಯರು, ಚಿಣ್ಣರು, ಬಾಲಕ, ಬಾಲಕಿಯರು ವಿವಿಧ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ರಾಮನಗರ, ಚನ್ನಪಟ್ಟಣ, ಬಿಡದಿ, ಕನಕಪುರ, ಮಾಗಡಿಯಿಂದ ಬಂದಿದ್ದ ಕ್ರೀಡಾಪಟುಗಳು ಕ್ರೀಡೆಯಲ್ಲಿ ಪಾಲ್ಗೊಂಡರು.

ಜಾನಪದ ಲೋಕಕ್ಕೆ ಭೇಟಿ ನೀಡಿದ್ದ ಪ್ರವಾಸಿಗರು ಮಕ್ಕಳಿಗೆ, ಸ್ನೇಹಿತರಿಗೆ, ಸಂಬಂಧಿಕರಿಗೆ ಈ ಆಟಗಳನ್ನು ಕುರಿತು ಮಾಹಿತಿ ನೀಡುತ್ತಿದ್ದರು. ಆ ಮೂಲಕ ತಮ್ಮ ಬಾಲ್ಯದ ದಿನಗಳನ್ನೂ ನೆನಪು ಮಾಡಿಕೊಳ್ಳುತ್ತಿದ್ದರು.

ಇಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗರು ಸ್ಥಳೀಯ ಗ್ರಾಮೀಣ ಕ್ರೀಡೆಯನ್ನು ನೋಡಿ, ಆಸ್ವಾದಿಸಿದರು. ತಮ್ಮ ಕ್ಯಾಮೆರಾಗಳಲ್ಲಿ, ಮೊಬೈಲ್‌ಗಳಲ್ಲಿ ಫೋಟೊಗಳನ್ನು ಕ್ಲಿಕ್ಕಿಸಿದರು.

ಚಾಲನೆ: ಗ್ರಾಮೀಣ ಆಟಗಳ ಸ್ಪರ್ಧೆಗೆ ಚಾಲನೆ ನೀಡಿದ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರ ಸ್ವಾಮೀಜಿ ಮಾತನಾಡಿ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಅವಶ್ಯಕತೆಯಿದೆ. ಗ್ರಾಮೀಣ ಆಟಗಳಲ್ಲಿ ನಮ್ಮ ನಾಡಿನ ಸಾಂಸ್ಕೃತಿಕ, ಸಾಮಾಜಿಕ ಅಂಶಗಳನ್ನು ಕಾಣಬಹುದಾಗಿದೆ ಎಂದು ತಿಳಿಸಿದರು.

ಮಕ್ಕಳು ಅತಿಯಾದ ಮೊಬೈಲ್ ಬಳಸುವುದರಿಂದ ಅವರ ಪ್ರತಿಭೆಯ ಅಂಶಗಳು ನಾಶವಾಗುತ್ತಿವೆ. ಮಕ್ಕಳಲ್ಲಿ ಖಿನ್ನತೆ, ನಿರಾಸಕ್ತಿ ಕಂಡು ಬರುತ್ತಿದೆ. ಪೋಷಕರು ಮಕ್ಕಳ ಉತ್ತಮ ಬೆಳವಣಿಗೆಯ ದೃಷ್ಟಿಯಿಂದ ಮೊಬೈಲ್ ಮತ್ತಿತರ ಸಂಪರ್ಕ ಸಾಧನಗಳಿಂದ ದೂರವಿರಿಸಬೇಕು ಎಂದು ತಿಳಿಸಿದರು.

ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ. ತಿಮ್ಮೇಗೌಡ ಮಾತನಾಡಿ, ‘ಮರೆಯಾಗುತ್ತಿರುವ ಗ್ರಾಮೀಣ ಆಟಗಳನ್ನು ಉಳಿಸಿಕೊಳ್ಳಬೇಕು. ಕಾಲಕ್ಕೆ ಅನುಗುಣವಾಗಿ ಮಕ್ಕಳು ವೈವಿಧ್ಯಮಯ ಆಟಗಳನ್ನು ರೂಢಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಜನಪದ ಆಟಗಳು ಮನರಂಜನೆ ಕೊಡುವುದರೊಂದಿಗೆ ದೈಹಿಕ ಹಾಗೂ ಮಾನಸಿಕ ಕಸರತ್ತನ್ನು ನೀಡುತ್ತವೆ. ಮನುಷ್ಯ ಸಂಬಂಧದ ಸಾಮರಸ್ಯವನ್ನು ಹೆಚ್ಚಿಸುವ ಇವು ನಮ್ಮ ಬದುಕಿನಿಂದ ಮರೆಯಾಗುತ್ತಿರುವುದು ವಿಷಾದನೀಯ ಎಂದರು.

ಜಾನಪದ ಲೋಕದ ಆಡಳಿತಾಧಿಕಾರಿ ಡಾ. ಕುರುವ ಬಸವರಾಜ್, ರಂಗ ನಿರ್ದೇಶಕ ಬೈರ್ನಳ್ಳಿ ಶಿವರಾಂ, ಪರಿಷತ್ತಿನ ಚನ್ನಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷ ಗೊ.ರಾ. ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.