ರಾಮನಗರ: ಸದ್ಯ ಬೇಲ್ ಮೇಲೆ ಬಂದಿರುವ ಜೈಲು ಹಕ್ಕಿಗೆ ತಿಹಾರ್ ಕಾಯಂ ವಿಳಾಸ ಆಗಬೇಕಿತ್ತು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಪರೋಕ್ಷವಾಗಿ ಕುಟುಕಿದರು.

ನಗರದಲ್ಲಿ ಮಂಗಳವಾರ ಉದ್ಯೋಗ ಮೇಳ ಉದ್ಘಾಟನೆ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಶಿವಕುಮಾರ್ ನೂರು ಜನ್ಮ ಹುಟ್ಟಿ ಬಂದರೂ ನನ್ನ ಮುಖಕ್ಕೆ ಮಸಿ ಬಳಿಯಲು ಆಗದು. ಸದ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಾನು ಆ ರೇಸ್ ನಲ್ಲೂ ಇಲ್ಲ. ಪಕ್ಷದಲ್ಲಿ ಯಾರೂ ನನಗೆ ವಿರೋಧಿಗಳಿಲ್ಲ. ಇದೆಲ್ಲ ವಿರೋಧ ಪಕ್ಷಗಳ ಕುತಂತ್ರ ಅಷ್ಟೇ ಎಂದರು.

ಭೇಟಿ ಆಗಿಲ್ಲ: ಕಾಂಗ್ರೆಸ್ ಮುಖಂಡ ಎಂ.ಬಿ. ಪಾಟೀಲ ಅವರನ್ನು ನಾನು ಭೇಟಿ ಆಗಿಲ್ಲ. ಅದರ ಅಗತ್ಯವೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.