ರಾಮನಗರ: ಇ-ಖಾತೆ ಅಕ್ರಮ ಆರೋಪದ ಮೇಲೆ ಅಮಾನತುಗೊಂಡಿದ್ದ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕನಕಪುರ ತಾಲ್ಲೂಕಿನ ಕೊಳ್ಳಿಗನಹಳ್ಳಿಯ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿದೆ.

ಈ ಹಿಂದೆ ಹಾರೋಹಳ್ಳಿ, ಬೈರಮಂಗಲ ಸೇರಿದಂತೆ ವಿವಿಧೆಡೆ ಅಕ್ರಮವಾಗಿ ಇ-ಖಾತೆ ಮಾಡಿಕೊಟ್ಟ ಆರೋಪದ ಮೇಲೆ ಪ್ರಕರಣಗಳು ದಾಖಲಾಗಿದ್ದವು. ಬೆಂಗಳೂರು ಸೈಬರ್ ಪೊಲೀಸರು ಕೆಲವು ತಿಂಗಳ ಹಿಂದೆ ಬೈರಮಂಗಲ ಗ್ರಾ.ಪಂ. ಕಚೇರಿ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದರು. ಈ ಸಂದರ್ಭ ರವಿ ನಾಪತ್ತೆ ಆಗಿದ್ದರು.

ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ರವಿ ಅವರನ್ನು ಜಿ.ಪಂ. ಸಿಇಒ ಇಕ್ರಂ ಈಚೆಗೆ ಸೇವೆಯಿಂದ ಅಮಾನತು ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.