ರಾಮನಗರ: ಜನ ಜಾಗೃತಿ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಅವರ ಜನ್ಮದಿನದ ಅಂಗವಾಗಿ, ರಥದಲ್ಲಿ ವಿವೇಕಾನಂದ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿ, ಬೈಕ್ ರ್ಯಾಲಿ ನಡೆಸಲಾಯಿತು.

ನಗರದ ರೋಟರಿ ವೃತ್ತದಲ್ಲಿ ಇರುವ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಸಾಧಕಿ ಚಿತ್ರಾ ರಾವ್, ವೇದಿಕೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ, ಮಾಜಿ ಶಾಸಕ ಕೆ. ರಾಜು, ಬಮೂಲ್ ನಿರ್ದೇಶಕ ಪಿ. ನಾಗರಾಜ್ ಸೇರಿದಂತೆ ಹಲವು ಗಣ್ಯರು ಮಾಲಾರ್ಪಣೆ ಮಾಡಿ, ಪೂಜೆ ನೆರವೇರಿಸುವ ಮೂಲಕ ಭಾವಚಿತ್ರ ಮೆರವಣಿಗೆ ಮತ್ತು ಬೈಕ್ ರ್ಯಾಲಿಗೆ ಚಾಲನೆ ನೀಡಿದರು.

ಅಲಿಂದ ಹೊರಟ ಮೆರವಣಿಗೆಯು ಐಜೂರು ವೃತ್ತ, ಹಳೆ ಬಸ್ ನಿಲ್ದಾಣದ ವೃತ್ತ, ಮಾರ್ಕೆಟ್ ರಸ್ತೆ, ಎಂ.ಜಿ. ರಸ್ತೆ, ವಾಟರ್ ಟ್ಯಾಂಕ್ ವೃತ್ತದ ಮಾರ್ಗವಾಗಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂತ್ಯಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.