ಬೆಳಗಾವಿ: ಹುಬ್ಬಳ್ಳಿಯಲ್ಲಿ ಮಂಗಳವಾರ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಸರಳವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪದ ಮೇಲೆ ಇಬ್ಬರು ಪ್ರಮುಖ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು.

ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ.

ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಜಾಡು ಹಿಡಿದು ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು ರಾಮದುರ್ಗ ಮಾರ್ಗವಾಗಿ ಸಂಚರಿಸುತ್ತಿರುವುದನ್ನು ಖಚಿತ ಮಾಡಿಕೊಂಡು, ಇಲ್ಲಿನ ಪೊಲೀಸರಿಗೆ ಮಾಹಿತಿ ರವಾನಿಸಿದರು.

ಆರೋಪಿಗಳು ಕಾರಿನಲ್ಲಿ ಬರುವುದನ್ನು ಖಾತ್ರಿ ಮಾಡಿಕೊಂಡ ರಾಮದುರ್ಗ ಪೊಲೀಸರು ರಾಜ್ಯ ಹೆದ್ದಾರಿ ಮೇಲೆ ಜೆಸಿಬಿ ಅಡ್ಡಹಾಕಿ ಕಾರ್ ನಿಲ್ಲಿಸಿದರು. ಇಬ್ಬರು ಪೊಲೀಸ್ ಅಧಿಕಾರಿಗಳು ಕೈಯಲ್ಲಿ ಪಿಸ್ತೂಲ್ ಹಿಡಿದುಕೊಂಡು ಕಾರಿಗೆ ಎದುರುಗೊಂಡರು. ಆರೋಪಿಗಳು ಹಿಂದಕ್ಕೆ ಕಾರ್ ತಿರುವಿ ಪರಾರಿಯಾಗದಂತೆ ಹಿಂಬದಿಯಿಂದಲೂ ವಾಹನ ನಿಲ್ಲಿಸಿ ತಡೆಯಲಾಯಿತು.

ಕಾರ್ ಸುತ್ತುವರಿದ ಪೊಲೀಸರು ಆರೋಪಿಗಳನ್ನು ಹಿಂಬದಿಯಿಂದ ಕೈಕಟ್ಟಿ, ಕಾಲರ್ ಹಿಡಿದು ಎಳೆದೊಯ್ದು ಪೊಲೀಸ್ ವಾಹನ ಹತ್ತಿಸಿದರು. ಅಲ್ಲಿಂದ ಹುಬ್ಬಳ್ಳಿ ಕಡೆಗೆ ಪ್ರಯಾಣ ಬೆಳೆಸಿದರು.

ರಾಮದುರ್ಗ ಡಿವೈಎಸ್‌ಪಿ ರಾಮನಗೌಡ ಹಟ್ಟಿ, ಸಿಪಿಐ ಐ.ಆರ್.ಪಟ್ಟಣಶೆಟ್ಟಿ, ಪಿಎಸ್ಐ ಶಿವಾನಂದ ಕಾರಜೋಳ ಈ ಕಾರ್ಯಾಚರಣೆ ನಡೆಸಿದರು. ಒಟ್ಟು 22 ಪೊಲೀಸರ ತಂಡ ಈ ಕಾರ್ಯಾಚರಣೆ ನಡೆಸಿತು.

ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆ

ರಾಜ್ಯದ ವಾಸ್ತು ಕ್ಷೇತ್ರದಲ್ಲಿ ಹೆಸರುಗಳಿಸಿದ್ದ ಬಾಗಲಕೋಟೆ ಮೂಲದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ದುಷ್ಕರ್ಮಿಗಳು ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಮಂಗಳವಾರ ಮಧ್ಯಾಹ್ನಭೀಕರವಾಗಿ ಹತ್ಯೆ ಮಾಡಲಾಗಿತ್ತು.

‘ಸರಳ ವಾಸ್ತು’ ಎನ್ನುವ ಪರಿಕಲ್ಪನೆಯೊಂದಿಗೆ ಸಾಕಷ್ಟು ಜನಮನ್ನಣೆ ಗಳಿಸಿದ್ದ ಚಂದ್ರಶೇಖರ್ ಗುರೂಜಿ ಹೀಗೆ ಹತ್ಯೆಯಾಗಿದ್ದು ವಾಸ್ತುಪ್ರಿಯರಲ್ಲಿ ಹಾಗೂ ಅವರ ಅಭಿಮಾನಿಗಳಿಗೆ ಬಹುದೊಡ್ಡ ಆಶ್ಚರ್ಯವನ್ನು ತಂದಿದೆ.

ಚಂದ್ರಶೇಖರ್ಗುರೂಜಿ ಯಾರು?

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಮೂಲತಃ ಬಾಗಲಕೋಟೆ ನಗರದ ಮೋಟಗಿ ಗಲ್ಲಿಯ ನಿವಾಸಿಯಾಗಿದ್ದರು.ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದರು. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಿವಾಸ ಹೊಂದಿದ್ದರು.

ಮೋಟಗಿ ಗಲ್ಲಿಯ ವಿರೂಪಾಕ್ಷಪ್ಪ ಅಂಗಡಿ, ನೀಲವ್ವ ಅಂಗಡಿಯವರ ಪುತ್ರನಾಗಿದ್ದ ಗುರೂಜಿ, ಆರು ಮಂದಿ ಮಕ್ಕಳಲ್ಲಿ ಚಂದ್ರಶೇಖರ ಮೂರನೇಯವರಾಗಿದ್ದರು.

ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮುಗಿಸಿನೌಕರಿ ಅರಸಿ ಅವರು ಮೂರೂವರೆ ದಶಕಗಳ ಹಿಂದೆ ಮುಂಬಯಿಗೆ ತೆರಳಿದ್ದರು. ಆರಂಭದಲ್ಲಿ ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಅವರು, ನಂತರ ಸರಳ ವಾಸ್ತು ಆರಂಭಿಸಿದ್ದರು. ಮುಂಬಯಿ, ಬೆಂಗಳೂರು, ಹುಬ್ಬಳ್ಳಿಯಲ್ಲಿ ವಾಸಿಸುತ್ತಿದ್ದರು.

ಗುರೂಜಿ ಅವರ ಮೊದಲ ಪತ್ನಿ ನಿಧನರಾಗಿದ್ದಾರೆ. ಅವರಿಗೆ ಒಬ್ಬರು ಮಗಳಿದ್ದಾರೆ. ಇನ್ನೊಬ್ಬ ಪತ್ನಿ ಕೂಡ ಇದ್ದು ಅವರಿಗೆ ಮಕ್ಕಳಿಲ್ಲ.

ಸರಳ ವಾಸ್ತು ಪ್ರವರ್ಧಮಾನಕ್ಕೆ ಬಂದ ನಂತರ ವಾಸ್ತುಪ್ರಿಯರಲ್ಲಿ ಜನಪ್ರಿಯತೆ ಗಳಿಸಿದ್ದ ಇವರು, ಒಬ್ಬ ಸ್ಟಾರ್ ವಾಸ್ತು ತಜ್ಞ ಎನ್ನಲಾಗುತಿತ್ತು.

ಎಂಜಿನಿಯರ್ ಆಗಬೇಕಿದ್ದ ಚಂದ್ರಶೇಖರ್ ಗುರೂಜಿ ಸರಳ ವಾಸ್ತು ತಜ್ಞರಾಗಿದ್ದು ಹೇಗೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.