ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ಶನಿವಾರ ಸ್ವಿಪ್ಟ್ ಹಾಗೂ ಇನ್ನೊವಾ ಕಾರುಗಳ ನಡುವೆ ಭೀಕರ ಅಪಘಾತವಾಗಿದೆ.

ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೊಸ ದೊಡ್ಡೇರಿ ಗ್ರಾಮದ ಇಮಾಮ್ ಸಾಬ್, ಚಂದ್ರಶೇಖರ ಹಾಗೂ ಸಿದ್ದಪ್ಪ ಮೃತಪಟ್ಟವರು.

ತಾಲ್ಲೂಕಿನ ಆಯನೂರಿನಿಂದ ಶಿವಮೊಗ್ಗದತ್ತ ಬರುತ್ತಿದ್ದ ಸ್ವಿಫ್ಟ್ ಕಾರು ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್ ನಿಂದ ಜೋಗದತ್ತ ತೆರಳುತ್ತಿದ್ದ ಇನ್ನೊವಾ ನಡುವೆ ಡಿಕ್ಕಿ ಸಂಭವಿಸಿದೆ.

ಇನ್ನೊವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದೇಶಿಯರು ಸೇರಿದಂತೆ ಐವರಿಗೆ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳ ವಿವರ ತಿಳಿದುಬರಬೇಕಿದೆ.

ಅಪಘಾತದಿಂದ ಕಾರುಗಳು ನಜ್ಜುಗುಜ್ಜಾಗಿದ್ದು, ಇನ್ನೊವಾದಲ್ಲಿ ಏರ್ ಬ್ಯಾಗ್ ತೆರೆದಿದ್ದರಿಂದ ಒಳಗಿದ್ದವರಿಗೆ ಹೆಚ್ಚಿನ ಗಾಯ ಆಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.