ಭದ್ರಾವತಿ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಹಾಗೂ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಲ್ಲಿನ ಕಲಾ ಸಾಧಕರೊಬ್ಬರು ತಮ್ಮ ಪ್ರತಿಭೆ ಅನಾವರಣಗೊಳಿಸಿದ್ದಾರೆ.

ಸೂಕ್ಷ್ಮ ಕಲಾಕೃತಿ (ಮೈಕ್ರೋ ಆರ್ಟ್ಸ್) ಮಾದರಿ ತಯಾರಿಕೆ ಕಲಾವಿದ, ನಗರದ ಸಚಿನ್ ಎಂ. ವರ್ಣೇಕರ್ ಅವರು ಅಯೋಧ್ಯೆಯ ರಾಮಮಂದಿರ ಮಾದರಿಗಳನ್ನು ತಯಾರಿಸಿದ್ದಾರೆ. 140 ಗ್ರಾಂ ತೂಕ, 6 ಇಂಚು ಉದ್ದ, 4 ಇಂಚು ಅಗಲ ಹಾಗೂ 5.5 ಇಂಚು ಎತ್ತರದ ಎರಡು ರಾಮಮಂದಿರ ಮಾದರಿ ತಯಾರಿಸಿದ್ದಾರೆ. ಚಿನ್ನ ಮತ್ತು ಬೆಳ್ಳಿ ಬಳಸಿ ಆಕರ್ಷಕವಾದ ಮಾದರಿ ಸಿದ್ಧಪಡಿಸಿದ್ದಾರೆ.

ಇವರು ಈ ಹಿಂದೆ ಚಿನ್ನ ಮತ್ತು ಬೆಳ್ಳಿ ಬಳಸಿ ಹಲವಾರು ಸೂಕ್ಷ್ಮ ಕಲಾಕೃತಿಗಳನ್ನು ರಚಿಸಿದ್ದಾರೆ. ಕೆಲವು ಕಲಾಕೃತಿಗಳನ್ನು ಧರ್ಮಸ್ಥಳ ವಸ್ತು ಸಂಗ್ರಹಾಲಯದಲ್ಲಿ ಇರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.