ಆನಂದಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪೂರಕ ವಾತಾವಾರಣ ಇದ್ದು, ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಆನಂದಪುರದ ವಿವಿಧ ಶಾಲೆಗಳಲ್ಲಿ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಗಳಾದ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕ ಕ್ಷೇತ್ರದ ಕೆ.ಕೆ.ಮಂಜುನಾಥ್ ಪರ ಮತಯಾಚನೆ ಮಾಡಿ ಮಾತನಾಡಿದರು.

‘ರಾಜ್ಯದಲ್ಲಿ ನಮ್ಮದೇ ಸರ್ಕಾರವಿರುವುದರಿಂದ ಹೊಸ ಹೊಸ ಯೋಜನೆಗಳು ಜಾರಿಗೆ ತರುತ್ತಾರೆ. ಬೇಡಿಕೆ ಈಡೇರುಸುತ್ತಾರೆ ಎಂಬ ಭರವಸೆಯಿಂದ ನಮ್ಮ ಅಭ್ಯರ್ಥಿಗಳು ಅಭೂತಪೂರ್ವ ಗೆಲವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಜೊತೆಗೆ 6ನೇ ಗ್ಯಾರಂಟಿಯಾಗಿ ಶಿಕ್ಷಕರಿಗೆ ಒಪಿಎಸ್ ಜಾರಿಗೆ ತರಲು ಮುಖ್ಯಮಂತ್ರಿ ಚಿಂತನೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಕಲಸೆ ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾ ಕುಮಾರಿ, ಪ್ರಮುಖರಾದ ಚೇತನ್ ರಾಜ್ ಕಣ್ಣೂರ್, ಸೋಮಶೇಖರ್ ಲ್ಯಾವಿಗೆರೆ, ರಾಮಚಂದ್ರಪ್ಪ, ನಜರುಲ್ಲಾ ಖಾನ್, ಖಲಿಮುಲ್ಲಾ ಖಾನ್, ರವಿಕುಮಾರ್, ಉಮೇಶ್ ಎನ್, ಗಜೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.