ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಮನವೊಲಿಸುವ ಪ್ರಯತ್ನ ಬಿಜೆಪಿ ಮುಖಂಡರಿಂದ ನಡೆಯುತ್ತಿದೆ.

ಭಾನುವಾರ ಬೆಳಗ್ಗೆಯಿಂದಲೇ ಕೆ.ಎಸ್.ಈಶ್ವರಪ್ಪ ಮನೆಗೆ ಬಿಜೆಪಿ ನಾಯಕರು ಬರುತ್ತಿದ್ದು, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಬಂದು ಈಶ್ವರಪ್ಪ ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಸಂಧಾನಕ್ಕೆ ಈಶ್ವರಪ್ಪ ಮಣಿಯದ ಹಿನ್ನೆಲೆಯಲ್ಲಿ ವಾಪಸ್ ಮರಳಿದರು.

ಮಧ್ಯಾಹ್ನ ಬಿಜೆಪಿ ಹೈಕಮಾಂಡ್ ಪರವಾಗಿ ಈಶ್ವರಪ್ಪ ಮನೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ ಅಗರವಾಲ್ ಹಾಗೂ ರಾಜೇಶ್ ಬಂದಿದ್ದು, ಈಶ್ವರಪ್ಪ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಚುನಾವಣಾ ಪ್ರಚಾರ ಕಾರ್ಯಕ್ಕೆ ಶಿವಮೊಗ್ಗಕ್ಕೆ ಬರುತ್ತಿದ್ದು, ಮುನ್ನಾದಿನ ಈಶ್ವರಪ್ಪ ಮನವೊಲಿಕೆ ಕಾರ್ಯಕ್ಕೆ ಪಕ್ಷದ ಮುಖಂಡರು ದೌಡಾಯಿಸುತ್ತಿರುವುದು ಕುತೂಹಲ ಕೆರಳಿಸಿದೆ.

ಈಶ್ವರಪ್ಪ ಶನಿವಾರ ಸಾಗರ ಬಳಿಯ ವರದಾಪುರದ ಶ್ರೀಧರ ಆಶ್ರಮಕ್ಕೆ ಭೇಟಿ ನೀಡಿದ ನಂತರ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಆರಂಭಿಸಿದ್ದರು.
.ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಸಚಿವ ಪ್ರಲ್ಹಾದ ಜೋಶಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.