ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ರಿಗೇಡ್ ರಚನೆ | ನಾಳೆ ಹುಬ್ಬಳ್ಳಿಯಲ್ಲಿ ಸಭೆ: ಈಶ್ವರಪ್ಪ

ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಗಿ
Published : 5 ಅಕ್ಟೋಬರ್ 2024, 20:16 IST
Last Updated : 5 ಅಕ್ಟೋಬರ್ 2024, 20:16 IST
ಫಾಲೋ ಮಾಡಿ
Comments

ಶಿವಮೊಗ್ಗ: ‘ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ–ಕಿತ್ತೂರು ಚನ್ನಮ್ಮ ಬ್ರಿಗೇಡ್ ರಚಿಸುತ್ತಿದ್ದೇವೆ. ಈ ಕುರಿತು ಚರ್ಚಿಸಲು ಅ.7ರಂದು ಹುಬ್ಬಳ್ಳಿಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಿದ್ದೇವೆ’ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಹೇಳಿದರು.

‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ 40ಕ್ಕೂ ಹೆಚ್ಚು ಮುಖಂಡರು ಪಾಲ್ಗೊಳ್ಳಲಿದ್ದಾರೆ. ಇದು ಪಕ್ಷಾತೀತ ಸಭೆ. ಯಾವ ಮಠಾಧೀಶರೂ ಇದರಲ್ಲಿ ಭಾಗವಹಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಅವರ ಬೆಂಬಲ ಪಡೆಯುವ ಬಗ್ಗೆ ಚರ್ಚಿಸುತ್ತೇವೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

‘ಜನರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿಯ ಶಿಫಾರಸು ಬಹಿರಂಗಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಅವರು ಈ ಹಿಂದೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ನಾನು ಬಿಜೆಪಿಗೆ ಹೋಗುವ ಪ್ರಶ್ನೆ ಸದ್ಯಕ್ಕಂತೂ ಇಲ್ಲ’ ಎಂದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT