ರಿಪ್ಪನ್ಪೇಟೆ: ರಿಪ್ಪನ್ಪೇಟೆ ಕಡೆಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮಂಗಳವಾರ ಚಿಕ್ಕಜೇನಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರಣ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಸ್ ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿತ್ತು. ಹೊಸನಗರ ಕಡೆಯಿಂದ ಭತ್ತದ ಕಟಾವು ಯಂತ್ರ ಸಾಗಿಸುತ್ತಿದ್ದ ಲಾರಿಗೆ ಮುಖಮುಖಿ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ.

ಗಾಯಾಳುಗಳನ್ನು ಸಾಗಿಸಲು ತುರ್ತು ವಾಹನ 108ಕ್ಕೆ ಕರೆ ಮಾಡಿದರೂ ಸಕಾಲದಲ್ಲಿ ವಾಹನ ಬರಲಿಲ್ಲ.
ಅಪಘಾತ ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪಿಎಸ್ಐ ಪ್ರವೀಣ್ ಕುಮಾರ್ ಎಸ್.ಪಿ. ಅವರು
ಪೊಲೀಸ್ ವಾಹನದಲ್ಲಿ ಗಾಯಾಳುಗಳನ್ನು ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಭೇಟಿ ನೀಡಿದ್ದರು. ಈ ಕುರಿತು ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.