ಶಿವಮೊಗ್ಗ: :‘ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಗುರ ಮತ್ತು ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು. ಇತರರ ಬಗ್ಗೆ ಹಗುರವಾಗಿ ಮಾತನಾಡುವ ಪ್ರವೃತ್ತಿಯನ್ನು ನಿಲ್ಲಿಸಬೇಕು’ ಎಂದು ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮೋದಿ ಅವರು ರಾಜ್ಯದ ಆರ್ಥಿಕ ದುಃಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಸಹಜವಾಗಿ ಇದೆ. ಅವರ ಮಾತನ್ನು ಗೌರವಿಸುವ ಬದಲು ಅವರ ಬಗ್ಗೆ ಅವಹೇಳನಕಾರಿ ಪದ ಪ್ರಯೋಗಿಸಿರುವುದು ಸಿದ್ದರಾಮಯ್ಯ ಅವರಂತಹ ಹಿರಿಯ ನಾಯಕರಿಗೆ ಭೂಷಣವಲ್ಲ’ ಎಂದು ತಿಳಿಸಿದ್ದಾರೆ.

‘ಭ್ರಷ್ಟಾಚಾರದಲ್ಲಿ ಓಲೈಕೆ ರಾಜಕಾರಣದಲ್ಲಿ ಮುಳುಗಿಹೋಗಿದ್ದ ದೇಶವನ್ನು ಇವತ್ತು ಜಗತ್ತಿನ ಬಲಿಷ್ಠ ರಾಷ್ಟ್ರಗಳ ಸಾಲಿನಲ್ಲಿ ಪ್ರಧಾನಿ ಮೋದಿ ಅವರು ನಿಲ್ಲಿಸಿರುವುದು ಸಣ್ಣ ಸಾಧನೆಯಲ್ಲ. ಆಯುಷ್ಮಾನ್ ಭಾರತ, ಜನೌಷಧ, ಆವಾಸ್ ಯೋಜನಾ, ಉಚಿತ ರೇಷನ್ ಸೇರಿದಂತೆ ಹಲವು ಯೋಜನೆಗಳ ಮೂಲಕ ಜನರ ಬದುಕನ್ನು ಕಟ್ಟುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಸರಿಯಾಗಿ ನಿರ್ವಹಿಸಲಾಗದೆ ರಾಜ್ಯವನ್ನು ದೀವಾಳಿಯ ಅಂಚಿಗೆ ತಂದು ನಿಲ್ಲಿಸಿದೆ. ಕಾಂಗ್ರೆಸ್ ಪಕ್ಷದ ನಾಯಕರು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುವ ಕುರಿತು ಮಾತಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಶಾಸಕರು ಆರೋಪಿಸುತ್ತಿದ್ದಾರೆ. ವೇತನ ಬಂದಿಲ್ಲ ಎಂದು ಅನೇಕ ನೌಕರರು ಕೊರಗುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಹಗುರವಾದ ಮಾತಿನ ಮೂಲಕ ಸಿಎಂ ತಮ್ಮ ಹತಾಶೆಯನ್ನು ಹೊರ ಹಾಕುತ್ತಿದ್ದಾರೆ. ಹಿರಿಯರ ಬಗ್ಗೆ ಅವಹೇಳನಕಾರಿ ಮಾತನಾಡುವುದು ಸಿದ್ದರಾಮಯ್ಯ ಅವರ ಹಳೆಯ ಚಾಳಿ. ಇದು ಅವರ ವ್ಯಕ್ತಿತ್ವಕ್ಕೆ ಹಲವು ಬಾರಿ ಕುಂದುಂಟು ಮಾಡಿದೆ. ಇನ್ನು ಮುಂದೆ ಪದ ಪ್ರಯೋಗ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು’ ಎಂದು ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಅವರು ಬಸವಣ್ಣ ಅವರನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸಿಕೊಳ್ಳದೆ, ಅವರ ಆದರ್ಶಗಳನ್ನು ಪಾಲಿಸಿದರೆ, ಅದು ಎಲ್ಲರಿಗೂ ಶೋಭೆ ತರುತ್ತದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.