ಸೊರಬ: ಗ್ಯಾರಂಟಿ ಯೋಜನೆಯನ್ನೇ ನಿಜವಾದ ಅಭಿವೃದ್ಧಿ ಎಂದು ಜನರನ್ನು ವಂಚಿಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಇದರಿಂದ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಾಣಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕುಟುಕಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಹಲವು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನರ ಪಾಲಿಗೆ ಇಲ್ಲವಾಗಿದೆ. ವರ್ಷದಿಂದ ಯಾವುದೇ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯು ಸಂಘಟನೆ ಆಧಾರದಲ್ಲಿ ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ. ರಾಜ್ಯ ಸರ್ಕಾರದ ಆಯಸ್ಸು ಎಷ್ಟು ತಿಂಗಳೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಮಾತನಾಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು, ಪ್ರಕಾಶ್ ಅಗಸನಹಳ್ಳಿ ಜಗದೀಶ್, ಜ್ಞಾನೇಶ್, ದೇವೇಂದ್ರಪ್ಪ ಚನ್ನಾಪುರ, ಚನ್ನವೀರಪ್ಪ, ಗುರುಕುಮಾರ್ ಪಾಟೀಲ್, ಎಂ.ಡಿ.ಉಮೇಶ್, ವಿನಾಯಕಪ್ಪ, ಅಶೋಕ್, ರಾಜು ಮಾವಿನಬಳ್ಳಿಕೊಪ್ಪ, ವಿನಯ್ ಶರ್ವಿ, ಕೃಷ್ಣಮೂರ್ತಿ, ಮಧುರಾಯ ಶೇಟ್, ಆಶಿಕ್, ನಟರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.