ಶಿವಮೊಗ್ಗ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹ 1.12 ಲಕ್ಷ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮೋಹನ್ ಜೆ.ಎಸ್. ಅವರು ಆದೇಶ ನೀಡಿದ್ದಾರೆ.

ದಂಡ ಕಟ್ಟಲು ವಿಫಲವಾದಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪರಿಹಾರ ರೂಪವಾಗಿ ದಂಡದ ಮೊತ್ತದಲ್ಲಿ ₹ 1 ಲಕ್ಷ ಮತ್ತು ಸರ್ಕಾರದಿಂದ ₹ 5 ಲಕ್ಷವನ್ನು ನೊಂದ ಬಾಲಕಿಗೆ ನೀಡಲು ನ್ಯಾಯಾಧೀಶರು ಗುರುವಾರ ಆದೇಶಿಸಿದ್ದಾರೆ.

2023ರಲ್ಲಿ ಭದ್ರಾವತಿ ತಾಲ್ಲೂಕಿನ 30 ವರ್ಷದ ವ್ಯಕ್ತಿಯು 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖಾಧಿಕಾರಿ ಸಿಪಿಐ ಶ್ರೀಶೈಲ್ ಕುಮಾರ್ ಜೆ. ಅವರು ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಶ್ರೀಧರ್ ಎಚ್.ಆರ್. ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.