- ‘ಜೀವ ಹಾನಿ; ಅಯೋಜಕರ ವಿರುದ್ಧ ಕ್ರಮ‘
‘ಕಳೆದ ವರ್ಷ ಕೆಲವು ಗ್ರಾಮಗಳಲ್ಲಿ ಆಯೋಜಿಸಿದ್ದ ಹೋರಿ ಹಬ್ಬದಲ್ಲಿ ಸಾವು ನೋವು ಸಂಭವಿಸಿದ್ದವು. ಈ ಸಂದರ್ಭದಲ್ಲಿ ಹೋರಿ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಂಡಿದ್ದೆವು. ಈ ಬಾರಿಯೂ ಅಷ್ಟೇ ಬಿಗಿ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಶಿವಮೊಗ್ಗ ಗ್ರಾಮಾಂತರ ವಿಭಾಗದ ಡಿವೈಎಸ್ಪಿ ಆರ್.ಆರ್. ಪಾಟೀಲ ತಿಳಿಸಿದರು. ‘ಕಳೆದ ಬಾರಿ ಸಾಂಪ್ರದಾಯಿಕವಾಗಿ ಹೋರಿ ಓಡಿಸುವ ಸ್ಪರ್ಧೆಗೆ ಮಾತ್ರ ಅವಕಾಶ ನೀಡಿದ್ದೆವು. ಆದರೆ ಹೋರಿ ಬೆದರಿಸುವ ಸ್ಪರ್ಧೆಗೆ ಅವಕಾಶವಿರಲಿಲ್ಲ. ಹೋರಿ ಬೆದರಿಸುವ ಸ್ಪರ್ಧೆ ನಡೆಸಬೇಕಾದರೆ ಆಯೋಜಕರು ಜಿಲ್ಲಾಡಳಿತದಿಂದ ಅನುಮತಿ ಪಡೆಯಬೇಕು’ ಎಂದು ಅವರು ಹೇಳಿದರು.