ಸೊರಬ: ರಾಜಕಾರಣದ ತೆವಲಿಗೋಸ್ಕರ ಎದುರಾಳಿ ಬಗ್ಗೆ ಹಗುರುವಾಗಿ ಮಾತನಾಡುವ ಸಚಿವರಿಗೆ ಕ್ಷೇತ್ರದ ಅಭಿವೃದ್ಧಿ ಬೇಕಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ನಟ ರಾಜಕುಮಾರ್ ಅವರ ಹೆಸರು ಬಳಸಿಕೊಂಡು ಅವರಿಗೆ ಅಪಮಾನ ಮಾಡಿರುವ ಸಚಿವ ಮಧು ಬಂಗಾರಪ್ಪ ಅವರಿಗೆ ತಮ್ಮ ಸ್ಥಾನದ ಗೌರವ ಗೊತ್ತಿಲ್ಲ ಎಂದು ಮಾಜಿ ಶಾಸಕ ಕುಮಾರ್ ಬಂಗಾರಪ್ಪ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು ಹಾಗೂ ಮತದಾರರಿಗೆ ಪಟ್ಟಣದ ಎಸ್.ಬಂಗಾರಪ್ಪ ಅವರ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ಕನ್ನಡ ಸರಿಯಾಗಿ ಓದಲು, ಬರೆಯಲು ಬಾರದವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಿರುವುದು ಕನ್ನಡಕ್ಕೆ ಮಾಡಿರುವ ಅಪಮಾನವಾಗಿದೆ. ತಕ್ಷಣವೇ ಅವರನ್ನು ಸಚಿವ ಸ್ಥಾನದಿಂದ ವಜಗೊಳಿಸಬೇಕು ಎಂದು ಆಗ್ರಹಿಸಿದರು.

ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಲುಗಾಡುತ್ತಿದ್ದು, ಯಾವುದೇ ಕ್ಷಣದಲ್ಲಿ ಪತನವಾಗಬಹುದು ಎಂದು ಹೇಳಿದರು.

‘ಸಂಸದರ ನಿಧಿ ಹಾಗೂ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ತಂದು ತಾಲ್ಲೂಕಿನ ಉದ್ದೇಶಿತ ದಂಡಾವತಿ ನೀರಾವರಿ ಯೋಜನೆ ಮಾಡಿಯೇ ತೀರುತ್ತೇವೆ. ಈ ಹಿಂದೆ ತಾಲ್ಲೂಕಿನಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಜನರು ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಜೊತೆಗೆ ರಸ್ತೆ, ನೀರಾವರಿ, ಆರೋಗ್ಯಕ್ಕೆ ಸಂಬಂಧಪಟ್ಟಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ’ ಎಂದು ತಿಳಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು, ಉಮೇಶ್, ಗುರುಕುಮಾರ್ ಪಾಟೀಲ್, ವಿನಾಯಕ ತವನಂದಿ, ಅಶೋಕ ಶೇಟ್ , ಲಲಿತಾ ನಾರಾಯಣ, ಸುಧಾ, ಜಾನಕಪ್ಪ, ಕೃಷ್ಣಮೂರ್ತಿ ಕೊಡಕಣಿ, ಟೇಕಪ್ಪ, ಕನಕದಾಸ ಕಲ್ಲಂಬಿ, ಗುರುಮೂರ್ತಿ ಹಿರೇಶಕುನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.