ಶಿವಮೊಗ್ಗ: ಇಲ್ಲಿನ ಸೈನ್ಸ್ ಮೈದಾನದಲ್ಲಿ ರೈತರ ಮಹಾ ಪಂಚಾಯತ್ ಆರಂಭವಾಗಿದೆ. ರೈತರ ಗೀತೆಗೆ ರೈತರೆಲ್ಲ ಹಸಿರು ಶಾಲನ್ನು ಬೀಸುತ್ತಾ ಒಗ್ಗಟ್ಟು ಪ್ರದರ್ಶಿಸಿದರು. ಬಿಸಿಲಿನ ಬೇಗೆಯಲ್ಲಿ ಬರುವ ರೈತರಿಗೆ ದಾಹ ತಣಿಸಲು ನೀರು, ಮಜ್ಜಿಗೆ, ಕಲ್ಲಂಗಡಿ, ನೆರಳಿನ ವ್ಯವಸ್ಥೆ ಮಾಡಲಾಗಿದೆ. ಏಕಕಾಲಕ್ಕೆ 25 ಸಾವಿರ ಜನರು ಕುಳಿತುಕೊಳ್ಳಲು ಅವಕಾಶ ಒದಗಿಸಲಾಗಿದೆ. ಸಂಯುಕ್ತ ಕಿಸಾನ್ ಮೊರ್ಚಾದ ನಾಯಕರಾದ ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಯದುವೀರ್ ಸಿಂಗ್, ರಾಜ್ಯ ಸಂಘದ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಮತ್ತಿತರರು ಭಾಗವಹಿಸುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತದಿಂದ ಬೆಳಿಗ್ಗೆ 7ಕ್ಕೆ ಹೊರಟು ತುಮಕೂರು, ತಿಪಟೂರು, ಅರಸೀಕೆರೆ, ಭದ್ರಾವತಿ ಮಾರ್ಗವಾಗಿ ಭಾಗವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.