ಅರಣ್ಯ ಇಲಾಖೆ ಸಾಗುವಳಿ ತೆರವುಗೊಳಿಸುವಂತೆ ನೋಟಿಸ್ ನೀಡಿರುವ ರೈತರಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರೂ ಇದ್ದಾರೆ. ಅವರಿಗೆ ಈಗ ಸಾಗುವಳಿ ಮಾಡುತ್ತಿರುವ ಭೂಮಿ ಬಿಟ್ಟರೆ ಬೇರೆ ಭೂಮಿ ಇಲ್ಲ.
ಯೋಗರಾಜ್ ಅಧ್ಯಕ್ಷರು ಚೆನ್ನಗೊಂಡ ಗ್ರಾಮ ಪಂಚಾಯಿತಿ
ಇಲಾಖೆಯಿಂದ ನೀಡಿರುವ ನೋಟಿಸ್ ಸಂಬಂಧ ಸಾಗುವಳಿದಾರರಿಂದ ಉತ್ತರ ಬಂದ ನಂತರವಷ್ಟೇ ಮೇಲಧಿಕಾರಿಗಳು ಕಾನೂನಿನ ಅನ್ವಯ ಕ್ರಮ ಕೈಗೊಳ್ಳುತ್ತಾರೆ.
ರಾಘವೇಂದ್ರ ಆರ್‌ಎಫ್‌ಒ ಕಾರ್ಗಲ್ ವಲಯ
ಕೇಂದ್ರ ಸರ್ಕಾರ ಅರಣ್ಯ ಸಂರಕ್ಷಣಾ ಕಾಯ್ದೆ– 1980ಕ್ಕೆ ತಿದ್ದುಪಡಿ ತಂದಿರುವುದನ್ನು ಕೆಲವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಕರಣ ಇತ್ಯರ್ಥವ ಆಗುವವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೆಲವು ರಿಟ್ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ರಾಜ್ಯದ ಹೈಕೋರ್ಟ್ ಆದೇಶಿಸಿದೆ. ಇದನ್ನು ಇಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ಪಾಲಿಸಬೇಕಿದೆ.