ಶಿವಮೊಗ್ಗ: ಇಲ್ಲಿನ ನ್ಯೂಮಂಡ್ಲಿ ಬಳಿ ಗುರುವಾರ ಹೂವಿನ ವ್ಯಾಪಾರಿ ಮೇಲೆ ಅನ್ಯಕೋಮಿನ ಯುವಕರು ಲಾಂಗು, ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೆ ಒಳಗಾದ ಮಧು (21) ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಲಿ ಬಡಾವಣೆಯಲ್ಲಿ ಹೂವು ಕೊಡಲು ಹೋದಾಗ ತೌಶೀಬ್ ನೇತೃತ್ವದ ಆರು ಯುವಕರ ತಂಡ ಹಲ್ಲೆ ನಡೆಸಿದೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಧು ಅವರು ಈಚೆಗಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸ್ಥಳೀಯರು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಾಲ್ಕು ತಿಂಗಳ ಹಿಂದೆ ಆರೋಪಿಗಳು ಮಂಡ್ಲಿ ಬಳಿ ಗಾಂಜಾ ಸೇದುತ್ತಿದ್ದ ಸಮಯದಲ್ಲಿ ಅಲ್ಲಿಗೆ ಹೋಗಿದ್ದ ಮಧು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದರು. ಈ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿರಬಹುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.