ಭದ್ರಾವತಿ: ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ 52ನೇ ವರ್ಷದ ವಿನಾಯಕ ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ ಭಾನುವಾರ ರಾತ್ರಿ ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು.

ತರೀಕೆರೆ ರಸ್ತೆಯ ಗಾಂಧಿವೃತ್ತದವರೆಗೆ ಮೆರವಣಿಗೆ ಸಾಗಿ ಅಂತಿಮವಾಗಿ ನಗರಸಭೆ ಮುಂಭಾಗದ ಭದ್ರಾನದಿಯಲ್ಲಿ ಗಣಪತಿ ವಿಸರ್ಜಿಸಲಾಯಿತು.

ಪ್ರತಿವರ್ಷದಂತೆ ಈ ಬಾರಿ ಸಹ ನಗರಸಭೆ ಕಚೇರಿ ಸಮೀಪದ ಮಸೀದಿ ಬಳಿ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ನೊಂದಿಗೆ ಕಟ್ಟೆಚ್ಚರ ವಹಿಸಲಾಗಿತ್ತು. ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿತ್ತು. ನಗರದ ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವ ಒಳರಸ್ತೆಗಳ ಸಂಪರ್ಕಗಳನ್ನು ನಿರ್ಬಂಧಿಸಲಾಗಿತ್ತು. ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ಪ್ರಮುಖರಾದ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಗೌರವಾಧ್ಯಕ್ಷರಾದ ಹೋಬಳಿದಾರ್ ಬಿ.ಎಸ್ ಲೋಕೇಶ್, ತಮ್ಮಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಸ್ ಭವಾನಿಕುಮಾರ್, ರಾಮನಾಥ್ ವಿ. ಬರ್ಗೆ, ಚನ್ನಪ್ಪ, ಸಾಗರ್ ರಾಮಣ್ಣ, ಖಜಾಂಚಿ ಎಂ. ಮಣಿ, ಉಪಾಧ್ಯಕ್ಷರಾದ ಜಿ. ಆನಂದಕುಮಾರ್, ಗಾಯಿತ್ರಿ ದಿಲೀಪ್ ಕುಮಾರ್, ಆರ್. ರಾಮಮೂರ್ತಿ, ಬಿ.ಎಸ್ ನಾರಾಯಣಪ್ಪ ದೊಡ್ಡಮನೆ, ಕೆ. ಮಂಜುನಾಥ್ ಕದಿರೇಶ್, ಕೆ. ಸುದೀಪ್ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಮುಖಂಡರಾದ ಎಸ್. ಕುಮಾರ್, ಮಂಗೋಟೆ ರುದ್ರೇಶ್, ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್ ಸೇರಿದಂತೆ ನಗರಸಭೆ ಸದಸ್ಯರು, ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು, ಮುಖಂಡರು ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.