ರಿಪ್ಪನ್ಪೇಟೆ: ಸಮೀಪದ ಹೊಂಬುಜದ ಪಾರ್ಶ್ವನಾಥಸ್ವಾಮಿ, ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನವೆಂಬರ್ 13ರಿಂದ 20ರವರೆಗೆ ‘ಇಂದ್ರಧ್ವಜ ಮಹಾಮಂಡಲ ವಿಧಾನ’ ಧಾರ್ಮಿಕ ಕೈಂಕರ್ಯ ಹಮ್ಮಿಕೊಳ್ಳಲಾಗಿದೆ.

ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದು, ಶಿವಮತಿ ಮಾತಾಜಿ ಅವರ ಉಪಸ್ಥಿತಿ ಇರಲಿದೆ.

ಕಾರ್ಯಕ್ರಮದಲ್ಲಿ ಶ್ರವಣಬೆಳಗೊಳದ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸೇರಿದಂತೆ ವಿವಿಧ ಜೈನ ಮಠದ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಶಿವಮೊಗ್ಗ ಜಿಲ್ಲೆಯ ಜೈನ ಧರ್ಮದ ವಿದ್ಯಾರ್ಥಿಗಳನ್ನು ಮಠದ ವತಿಯಿಂದ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.