ಹೊಸನಗರ: ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ಮತ್ತಿಕೈ ಗ್ರಾಮದಲ್ಲಿ ಗುರುವಾರ ರಾತ್ರಿ ತನ್ನ ಎರಡು ಮಕ್ಕಳನ್ನು ಬಾವಿಗೆ ಎಸೆದು ತಾನೂ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರ ಹೋಬಳಿ ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12), ಸಂಪದ (6) ಮೃತಪಟ್ಟವರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ನಗರ ಠಾಣೆ ಪಿಎಸ್ಐ ರಮೇಶ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

ಮೃತದೇಹಗಳನ್ನು ಬಾವಿಯಿಂದ ಹೊರಗೆ ತೆಗೆಯಲಾಗಿದೆ. ನಗರ ಆಸ್ಪತ್ರೆಯ ಶವಾಗಾರಕ್ಕೆ ಶವ ತಂದು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ.

ಇಡೀ ಗ್ರಾಮದಲ್ಲಿ ಸ್ಮಶಾನಮೌನ ಆವರಿಸಿದೆ. ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.