ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ಸಚಿವ ಮಧು ಬಂಗಾರಪ್ಪ

Published 27 ಜೂನ್ 2024, 15:58 IST
Last Updated 27 ಜೂನ್ 2024, 15:58 IST
ಅಕ್ಷರ ಗಾತ್ರ

ಸೊರಬ: ಶಿಕ್ಷಣದಲ್ಲಿ ಸಮಾನತೆ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ತಾಲ್ಲೂಕಿನ ನಿಸರಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲಕಾಲಕೊಪ್ಪ ಗ್ರಾಮದಲ್ಲಿ ವಿವೇಕ ಯೋಜನೆಯಡಿ ನಿರ್ಮಿಸಿರುವ ನೂತನ ಶಾಲಾ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ವಿವೇಕ ಯೋಜನೆಯಡಿ 8,200 ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಕೊರತೆ ಇರುವೆಡೆ  ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಸಾಕಷ್ಟು ಅಹವಾಲುಗಳು ಬಂದಿದ್ದು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದ ಅವರು ಹೇಳಿದರು.

ತಾಲ್ಲೂಕಿನಲ್ಲಿ ಶಾಶ್ವತ ನೀರಾವರಿ ಯೋಜನೆ ಕೈಗೊಳ್ಳಲು ವರದಾ ನದಿಗೆ ಅಡ್ಡಲಾಗಿ 5 ಬ್ಯಾರೇಜ್ ನಿರ್ಮಾಣಕ್ಕೆ ಇಲಾಖಾ ಮಟ್ಟದಲ್ಲಿ ಅನುಮೋದನೆ ದೊರೆತಿದೆ ಎಂದರು.

ನಿಸರಾಣಿಯಿಂದ ಮಾಸೂರು ಮಾರ್ಗವಾಗಿ ಸಾಗರಕ್ಕೆ ಸಂಪರ್ಕ ಸೇತುವೆಯಾಗಿ ಸಾರ್ವಜನಿಕರಿಗೆ ಅನುಕೂಲವಿರುವ ಸರ್ಕಾರಿ ಬಸ್ ಸೇವೆ ಉದ್ಘಾಟಿಸಲಾಯಿತು.

ಉಳವಿ ದೂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಕೊಠಡಿ ಉದ್ಘಾಟನೆ ಹಾಗೂ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕುಂದು ಕೊರತೆಗಳ ಬಗ್ಗೆ ಸಭೆ ನಡೆಸಿ ಆಹವಾಲು ಸ್ವೀಕರಿಸಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾ, ಡಿಡಿಪಿಐ ಪರಮೇಶ್ವರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ. ಅಣ್ಣಪ್ಪ, ತಬಲಿ ಬಂಗಾರಪ್ಪ ಬಿಇಒ ಓಂಕಾರಪ್ಪ, ಸುಮಂಗಲಾ, ಶಿವಕುಮಾರ್, ರಶ್ಮಿ , ಮುಖ್ಯಶಿಕ್ಷಕ ದೇವರಾಜ್, ಅಣ್ಣಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT