ಶಿಕಾರಿಪುರ: ಗಣರಾಜ್ಯೋತ್ಸವದ ದಿನದಂದು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡದೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪುರಸಭೆ ಮುಖ್ಯಾಧಿಕಾರಿ ಭರತ್ ವಿರುದ್ಧ ತಾಲ್ಲೂಕು ಕಚೇರಿ ಎದುರು ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

‘ಅಂಬೇಡ್ಕರ್ ಅವರ ಹೆಸರಿನಲ್ಲಿ ಹಲವು ಜನರು ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಿದ್ದಾರೆ. ಅಂಬೇಡ್ಕರ್ ರಚಿಸಿದ ಸಂವಿಧಾನದ ಮೀಸಲಾತಿ ಅಡಿಯಲ್ಲಿ ನೌಕರಿ ಪಡೆದ ಮುಖ್ಯಾಧಿಕಾರಿ ಭರತ್ ಅಂಬೇಡ್ಕರ್ ಅವರಿಗೆ ಅಗೌರವ ತೋರುವ ಮೂಲಕ ಕರ್ತವ್ಯ ಲೋಪ ಎಸಗಿದ್ದಾರೆ. ಅವರನ್ನು ಅಮಾನತು ಮಾಡಬೇಕು ಎಂದು ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಚುರ್ಚಿಗುಂಡಿ ಜಗದೀಶ್ ಒತ್ತಾಯಿಸಿದರು.

ಅಂಬೇಡ್ಕರ್ ಪುತ್ಥಳಿ ರಕ್ಷಣೆಗಾಗಿ ಸುತ್ತಲೂ ಕಬ್ಬಿಣದ ಸರಳು ಹಾಕಬೇಕು. ಮಾಲಾರ್ಪಣೆ ಮಾಡಲು ಏಣಿ ಅಳವಡಿಸಬೇಕು ಎಂದು ಒತ್ತಾಯಿಸಿ ಉಪತಹಶೀಲ್ದಾರ್ ರವಿಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮುಖಂಡರಾದ ಚಂದ್ರಪ್ಪ, ಅರಳೇಹಳ್ಳಿ ಸುರೇಶ್, ನೆವಲವಾಗಿಲು ಗಣೇಶ್, ಸುನೀಲ್ ಬನ್ನೂರು, ಈಸೂರು ಪರಮೇಶ್, ರಾಮಪ್ಪ, ಹನುಮಂತಪ್ಪ, ಆನಂದ್, ರವಿನಾಯ್ಜ, ನಾಗರಾಜ್ , ಕೃಷ್ಣನಾಯ್ಕ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.