ಸೊರಬ: ‘ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರು ನಟ ಶಿವರಾಜ್ ಕುಮಾರ್ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಮೂಲಕ ರಾಹುಲ್ ಗಾಂಧಿ ಮೆಚ್ಚಿಸಲು ಮುಂದಾಗಿದ್ದಾರೆ’ ಎಂದು ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಆರೋಪಿಸಿದರು.

ಶುಕ್ರವಾರ ತಾಲ್ಲೂಕಿನ ಉಳವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್ ಅಭ್ಯರ್ಥಿ ಕೊರೊನಾ ಕಾಲದಲ್ಲಿ ವಿದೇಶದಲ್ಲಿದ್ದರು. ಕಾರ್ಯಕರ್ತರ ಆರೋಗ್ಯ ವಿಚಾರಿಸಲಿಲ್ಲ. ಪ್ರತಿ ಚುನಾವಣೆಯಲ್ಲಿ ಪಕ್ಷ ಬದಲಾಯಿಸುವ ಮಧು ಬಂಗಾರಪ್ಪ ಎಲೆಕ್ಷನ್‌ನಲ್ಲಿ ಕಲೆಕ್ಷನ್‌ಗಾಗಿ ಸ್ಪರ್ಧೆ ಮಾಡುತ್ತಾರೆ’ ಎಂದು ವ್ಯಂಗ್ಯವಾಡಿದರು.

‘ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಜಾಮೀನು ಮೇಲೆ ಸುತ್ತಾಡುತ್ತಾರೆ. ಜನರ ಅಭ್ಯುದಯಕ್ಕಾಗಲಿ, ಅಥವಾ ಅಭಿವೃದ್ಧಿಗಾಗಿ ಹೋರಾಟ ಮಾಡುತ್ತಿಲ್ಲ’ ಎಂದು ದೂರಿದರು.

‘ಈ ಚುನಾವಣೆ ಅಭಿವೃದ್ಧಿಗಾಗಿ ನಡೆಯುತ್ತಿದೆ. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಈಗಾಗಲೇ ನೀರಾವರಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮತ್ತಷ್ಟು ಅಭಿವೃದ್ಧಿ ಪಡೆಸಲು ಬಿಜೆಪಿ ಬೆಂಬಲಿಸಿ’ ಎಂದು ಮನವಿ ಮಾಡಿದರು.

‘ದೇಶದಲ್ಲಿ ಕಾಂಗ್ರೆಸ್ ಹಳಸಿ ಹೋಗಿದೆ. ಒಂದು ಕಾಲದಲ್ಲಿ ಬಹುಮತದೊಂದಿಗೆ ಗೆದ್ದ ಪಕ್ಷ ಇಂದು ವಿರೋಧ ಪಕ್ಷ ಸ್ಥಾನ ಪಡೆಯಲೂ ವಿಫಲವಾಗಿದೆ. ಜನರನ್ನು ಕೇವಲ ಮತಕ್ಕೆ ಬಳಸಿಕೊಳ್ಳುತ್ತಿರುವ ಪರಿಣಾಮ ಆಕ್ರೋಶಕ್ಕೆ ಕಾರಣವಾಗಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಟೀಕಿಸಿದರು.

ಮಡಿವಾಳ ಮಾಚಿದೇವ ನಿಗಮದ ರಾಜ್ಯಾಧ್ಯಕ್ಷ ರಾಜು ತಲ್ಲೂರು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು, ಉಳವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪರಶುರಾಮಪ್ಪ, ಬರಗಿ ನಿಂಗಪ್ಪ, ಸುರೇಶ್ ಉದ್ರಿ, ಬರಗಿ ನಾಗರಾಜ್, ಶಾರದಮ್ಮ, ಯೋಗೇಶ್ ಹೆಸರಿ, ಮಂಜಪ್ಪ ಉಳವಿ, ಜಿ.ಟಿ.ಗಣಪತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.