ಶಿವಮೊಗ್ಗ: ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ಶೀತಲ ಯುದ್ಧ ಮುಂದಿನ ದಿನಗಳಲ್ಲಿ ಭೀಕರಗೊಳ್ಳಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.

’ಪಾಂಡವರು–ಕೌರವರ ನಡುವೆ ಗದಾಯುದ್ಧ ನಡೆದಿದ್ದರ ಬಗ್ಗೆ ಈ ಹಿಂದೆ ಕೇಳಿದ್ದೆವು. ಈಗ ಕಾಂಗ್ರೆಸ್ ಪಕ್ಷದ ಒಳಗಡೆಯೇ ಮಹಾಯುದ್ಧವಾಗಲಿದೆ. ರಾಜ್ಯದ ಜನರು ಶೀಘ್ರ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ‘ ಎಂದು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ನಾಯಕರ ನಡುವಿನ ಒಳಜಗಳ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಹುದ್ದೆಗೆ ಏರಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಆದರೆ ಬಿಜೆಪಿ ಮತ್ತೆ ಗೆದ್ದು ಬರಲಿದೆ ಎಂದರು.

ರಾಜ್ಯದಲ್ಲಿ ಬರಗಾಲ ಇದ್ದರೂ ಪರಿಹಾರ ಕಾರ್ಯಗಳತ್ತ ಗಮನ ನೀಡದೇ ಒಳಜಗಳದಲ್ಲಿ ತೊಡಗಿರುವ ಕಾಂಗ್ರೆಸ್‌ನವರಿಗೆ ಜನ ಶಾಪ ಹಾಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾ ಬೈಯುತ್ತಿದ್ದರೆ ಕೇಂದ್ರದಿಂದ ಅನುದಾನ ಸಿಗುತ್ತಾ ಎಂದು ಯಡಿಯೂರಪ್ಪ ಅವರು ಹೇಳಿರುವುದು ಸರಿಯಾಗಿದೆ. ಪ್ರಧಾನಿ ಟೀಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗೊಲ್ಲ. ಬದಲಿಗೆ ರೈತಾಪಿ ವರ್ಗಕ್ಕೆ, ಜನಸಾಮಾನ್ಯರಿಗೆ ಅನಾನುಕೂಲವಾಗಲಿದೆ ಎಂದು ಹೇಳಿದರು.

ಈ ಹಿಂದೆ ಬಿಜೆಪಿ ಸರ್ಕಾರ ರಚನೆ ಸಮಯದಲ್ಲಿ ಕಾಂಗ್ರೆಸ್‌ನಿಂದ ಹೋಗಿದ್ದ ಶಾಸಕರಿಗೆ ತಲಾ ₹50 ಕೋಟಿ ಕೊಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಹೇಳಿಕೆಯೇ ಹಾಸ್ಯಾಸ್ಪದ ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿದರು.
.ರಾಜ್ಯ ಸರ್ಕಾರ ಯಾವುದೇ ಕ್ಷಣದಲ್ಲಾದರೂ ಪತನ ಆಗಬಹುದು: ಕೆ.ಎಸ್. ಈಶ್ವರಪ್ಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.