ಶಿವಮೊಗ್ಗ: ತಾಂತ್ರಿಕ ಕಾರಣಗಳಿಂದ ತಡವಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಪ್ರಕಟಿಸಲಾಗಿದೆ.

ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಪೋರ್ಟಲ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಅಕೌಂಟ್‌ಗಳ ಮೂಲಕ ಲಾಗಿನ್ ಆಗಿ ಫಲಿತಾಂಶ ಪಡೆದುಕೊಳ್ಳಬಹುದು.

‘ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಳೆದ ತಿಂಗಳೇ ಮುಗಿದಿತ್ತು. ಆದರೆ ವಿವಿಯ ಸಿಬಿಸಿಎಸ್ ಪರಿನಿಯಮವನ್ನು ಯುಯುಸಿಎಂಎಸ್ ಸಾಫ್ಟ್‌ವೇರ್‌ಗೆ ಅಳವಡಿಸುವಲ್ಲಿ ತಾಂತ್ರಿಕ ತೊಡಕು ಎದುರಾಗಿತ್ತು. ಈಗ ರಾಜ್ಯಮಟ್ಟದ ನೋಡಲ್ ಅಧಿಕಾರಿಗಳ ಸಹಕಾರದೊಂದಿಗೆ ಸಮಸ್ಯೆ ಪರಿಹಾರವಾಗಿದ್ದು, ಫಲಿತಾಂಶ ನೀಡಲಾಗಿದೆ’ ಎಂದು ಪರೀಕ್ಷಾಂಗ ಕುಲಸಚಿವ ಎಸ್.ಎಂ.ಗೋಪಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.