ಶಿರಾಳಕೊಪ್ಪ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ 9 ವರ್ಷಗಳಲ್ಲಿ ರಾಮ ಮಂದಿರ ಕಟ್ಟಿಸಿ ಲೋಕಾರ್ಪಣೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರೇ ಮತ್ತೆ ಪ್ರಧಾನಿಯಾಗಲಿ ಎಂದು ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆಶಯ ವ್ಯಕ್ತಪಡಿಸಿದರು.

ಸಮೀಪದ ತೊಗರ್ಸಿ ಗ್ರಾಮದ ಚನ್ನವೀರ ರೈಸ್ ಮಿಲ್ ಆವರಣದಲ್ಲಿ ಈಚೆಗೆ ನಡೆದ ‘ನಮೋ ಭಾರತ’ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.

ಬಿಜೆಪಿ ಚುನಾವಣಾ ಪ್ರಚಾರಕ್ಕೆ ಕಾಲಿಡುವ ಮುಂಚೆಯೇ ನಮೋ ಬ್ರಿಗೇಡ್ ವತಿಯಿಂದ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್, ಹಿಜಾಬ್ ಮೇಲಿನ ನಿಷೇಧ ವಾಪಸ್ ಪಡೆಯುವ ಹೇಳಿಕೆ ನೀಡುವ ಮೂಲಕ ಶಾಲಾ–ಕಾಲೇಜು ಮಕ್ಕಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಟಿಕಿಸಿದರು.

ಪಂಚವಣ್ಣಿಗೆ ಮಠದ ಚನ್ನವೀರ ದೇಶಿಕೇಂದ್ರ ಸ್ವಾಮೀಜಿ, ಮಳೆ ಹಿರೇಮಠದ ಕಿರಿಯ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ನಮೋ ಬ್ರಿಗೇಡ್ ಶೆಣೈ ಪ್ರಾಸ್ತಾವಿಕ ಮಾತನಾಡಿದರು. ಶಿವಕುಮಾರ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.