ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 15ರಿಂದ ಚಳುವಳಿ ಆರಂಭಿಸಲಾಗುವುದು ಎಂದು ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಎಚ್ಚರಿಸಿದರು.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಶರಾವತಿ ಸಂತ್ರಸ್ತರ ಸಮಸ್ಯೆಯನ್ನು 15 ದಿನದೊಳಗೆ ಬಗೆಹರಿಸುವುದಾಗಿ ಹೇಳಿದ್ದರು. ಪ್ರಸ್ತುತ ರಾಘವೇಂದ್ರ ಅವರು ತಟಸ್ಥ ನಿಲುವು ತಾಳಿದ್ದಾರೆ. ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರೈತರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಬುಧವಾರ ಸುದ್ಧಿಗೋಷ್ಠಿಯಲ್ಲಿ ಆಗ್ರಹಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭಾಗ್ಯಗಳನ್ನು ನೀಡುತ್ತಿದೆ. ಜೊತೆಗೆ ಮಲೆನಾಡಿನಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಭೂ ಭಾಗ್ಯ ಕೂಡ ನೀಡಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಕುಂಚೇನಹಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲಿ ರೈತರ ವಿರುದ್ಧ ಕೇಸು ದಾಖಲಿಸಿ, ಅವರ ವಿರುದ್ಧ ದೌರ್ಜನ್ಯ ನಡೆಸುತ್ತಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಗೆ ಬಂದು ರೈತರ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಮುಖರಾದ ತೀರ್ಥನಾಯ್ಕ, ವಾಸುದೇವ ನಾಯ್ಕ, ಶಿವಾಜಿ ನಾಯ್ಕ, ಜಯರಾಮ್ ನಾಯ್ಕ, ವಿನಾಯಕ ಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.