ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಎರಡು ವರ್ಷಗಳ ಹಿಂದೆ ಐದು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಯುವಕನಿಗೆ ಇಲ್ಲಿನ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ₹60 ಸಾವಿರ ದಂಡ ವಿಧಿಸಿದೆ.

2020ರ ಡಿಸೆಂಬರ್ 5ರಂದು ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಮೇಲೆ ಬಿ.ಸಿ.ವೆಂಕಟೇಶ್ (23) ಎಂಬುವವನು ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನ ಅನ್ವಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣದಾಖಲಿಸಿಕೊಳ್ಳಲಾಗಿತ್ತು.

ತೀರ್ಥಹಳ್ಳಿ ಸಿಪಿಐ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಕೈಗೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ದೃಢಪಟ್ಟ ಕಾರಣ ಆರೋಪಿಗೆ ಶಿಕ್ಷೆ ವಿಧಿಸಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಸದಾ ಸೆರೆವಾಸ ಅನುಭವಿಸುವಂತೆ ಆದೇಶ ನೀಡಿದೆ. ಸರ್ಕಾರಿ ವಕೀಲ ಹರಿಪ್ರಸಾದ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.